ಮಧ್ಯಪ್ರದೇಶ: ಇಂದೋರ್‌ನಲ್ಲಿ ರಾತ್ರಿ 19 ವರ್ಷದ ಯುವಕ ತನ್ನ ತಂದೆಯ ಪರವಾನಗಿ ಪಡೆದ ಬಂದೂಕಿನಿಂದ ಗುಂಡು ಹಾರಿಸಿ ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಘಟನೆಯ ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಬಂದೂಕನ್ನು ವಶಪಡಿಸಿಕೊಂಡಿದ್ದಾರೆ.
ಮೃತ ಅಬ್ದುರ್ ರಾಫೆ (19), ಬಿಎ ಎಲ್‌ಎಲ್‌ಬಿ ವಿದ್ಯಾರ್ಥಿ, ನಯಾಪುರ ನಿವಾಸಿ ಎಂದು ಹೇಳಲಾಗಿದೆ. ಮೇಲ್ನೋಟಕ್ಕೆ, ಮೃತರು ತಮ್ಮ ತಂದೆ ಅತೀಫ್ ಅವರ ಪರವಾನಗಿ ಪಡೆದ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತೋರುತ್ತದೆ.
ಮರಣೋತ್ತರ ಪರೀಕ್ಷೆಯ ವರದಿ ಇನ್ನೂ ಬಂದಿಲ್ಲ. ಎಂ.ಜಿ.ರಸ್ತೆ ಠಾಣೆ ಪೊಲೀಸರು ಸಂಬಂಧಿಕರ ಹೇಳಿಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ.
Post a Comment