ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ದಲಿತರ ಮನೆಯಲ್ಲಿ ಬೆಳಗ್ಗಿನ ಅತಿಥ್ಯ ಸ್ವೀಕರಿಸಿದ ಸಿಎಂ ಬಸವರಾಜ ಬೊಮ್ಮಾಯಿ

ದಲಿತರ ಮನೆಯಲ್ಲಿ ಬೆಳಗ್ಗಿನ ಅತಿಥ್ಯ ಸ್ವೀಕರಿಸಿದ ಸಿಎಂ ಬಸವರಾಜ ಬೊಮ್ಮಾಯಿ

 


ಹೊಸಪೇಟೆ: ತಾಲ್ಲೂಕಿನ ಕಮಲಾಪುರ ಗ್ರಾಮದ ಅಂಬೇಡ್ಕರ್ ನಗರದ ಹಿರಾಳ ಕೊಲ್ಲಾರಪ್ಪ ಅವರ ಮನೆಯಲ್ಲಿ ಬೆಳಗ್ಗೆಯಿಂದಲೇ ಸಡಗರದ ವಾತಾವರಣ. ಅಡುಗೆ ಮನೆಯಲ್ಲಿ ಅವರ ಪುತ್ರಿಯರಾದ ಹುಲಿಗೆಮ್ಮ ಹಾಗೂ ರೇಣುಕಾ ಬೆಳಗಿನ ಉಪಾಹಾರದ ತಯಾರಿಯಲ್ಲಿ ನಿರತರಾಗಿದ್ದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗಾಗಿ ಕೇಸರಿಬಾತ್, ಮಂಡಕ್ಕಿ ಒಗ್ಗರಣೆ, ಮಿರ್ಚಿ, ಉಪ್ಪಿಟ್ಟಿನ ತಯಾರು ಮಾಡಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಆನಂದ್ ಸಿಂಗ್ ಅವರೊಂದಿಗೆ ಆಗಮಿಸಿದ ಮುಖ್ಯಮಂತ್ರಿಗಳು ಕಮಲಾಪುರ ಅಂಬೇಡ್ಕರ್ ನಗರದ ದಲಿತ ಹಿರಾಳ ಕೊಲ್ಲಾರಪ್ಪ ಅವರ ಮನೆಯಲ್ಲಿ ಬೆಳಗಿನ ಉಪಾಹಾರ ಸವಿದರು.

ಕೊಲ್ಲಾರಪ್ಪ ಕುಟುಂಬದವರೊಂದಿಗೆ ಕುಶಲೋಪರಿ ವಿಚಾರಿಸಿದರು. ಕೊಲ್ಲಾರಪ್ಪ ನವರ ಮೊಮ್ಮಗಳು ಅಶ್ವಿನಿ ತಡಕಲ್ ಸರ್ಕಾರಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿರುವ ವಿಷಯ ತಿಳಿದು ಮೆಚ್ಚುಗೆ ವ್ಯಕ್ತಪಡಿಸಿದರು.

ಅವಳ ಶಿಕ್ಷಣ, ಕಾಲೇಜು ವಾತಾವರಣ ಮೊದಲಾದ ಕುರಿತು ಮಾಹಿತಿ ಪಡೆದರು.
ಕಾಲೇಜು ಚೆನ್ನಾಗಿದೆ.

ಆದರೆ ಮೆಸ್ ಬಿಲ್ ದುಬಾರಿ ಎಂದು ಆಕೆ ಮುಖ್ಯಮಂತ್ರಿಯವರ ಗಮನ ಸೆಳೆದಾಗ ಇದನ್ನು ಸರಿಪಡಿಸುವುದಾಗಿ ಭರವಸೆ ನೀಡಿದರು.

ಮನೆಯವರು ಪ್ರೀತಿಯಿಂದ ಉಣಬಡಿಸಿದ ಉಪಾಹಾರ , ಚಹಾ ಸೇವಿಸಿ ಮುಂದಿನ ಕಾರ್ಯಕ್ರಮಕ್ಕೆ ತೆರಳಿದರು.

0 Comments

Post a Comment

Post a Comment (0)

Previous Post Next Post