ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮತ್ತೆ 5 ದಿನಗಳ ಕಾಲ ಭಾರೀ ಮಳೆಯಾಗುವ ಸಂಭವ ; ಹವಾಮಾನ ಇಲಾಖೆ ಮುನ್ಸೂಚನೆ

ಮತ್ತೆ 5 ದಿನಗಳ ಕಾಲ ಭಾರೀ ಮಳೆಯಾಗುವ ಸಂಭವ ; ಹವಾಮಾನ ಇಲಾಖೆ ಮುನ್ಸೂಚನೆ

 


ಬೆಂಗಳೂರು: ರಾಜ್ಯಾದ್ಯಂತ ಮತ್ತೆ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ಕಲಬುರ್ಗಿ, ಕೊಪ್ಪಳ ಜಿಲ್ಲೆಗಳಲ್ಲಿಯೂ ವ್ಯಾಪಕ ಮಳೆಯಾಗಲಿದ್ದು, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ 5 ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಲ್ಲಿ ತಿಳಿಸಿದೆ.

0 تعليقات

إرسال تعليق

Post a Comment (0)

أحدث أقدم