ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ಬಂಧನವಾದ ಚಿತ್ರದುರ್ಗದ ಮುರುಘಾಶ್ರೀಗಳ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಮುರುಘಾಶ್ರೀಗಳ ನ್ಯಾಯಾಂಗ ಬಂಧನ ಅವಧಿ ಇಂದು ಮುಕ್ತಾಯವಾಗಿದ್ದರಿಂದ ಶ್ರೀಗಳನ್ನು ಚಿತ್ರದುರ್ಗದ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದ್ದು, ಅಕ್ಟೋಬರ್ 21ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶ ಹೊರಡಿಸಿದೆ.
ಇದೇ ವೇಳೆ ಪ್ರಕರಣದ ಎರಡನೇ ಆರೋಪಿ ವಾರ್ಡನ್ ರಶ್ಮಿ ನ್ಯಾಯಾಂಗ ಬಂಧನ ಅವಧಿಯನ್ನೂ ವಿಸ್ತರಿಸಲಾಗಿದೆ.
Post a Comment