ಮಂಗಳೂರು: ನಗರದ ಪದವಿನಲ್ಲಿರುವ ಶ್ರೀ ವೇದಮಾಯು ಆಯುರ್ವೇದ ಆಸ್ಪತ್ರೆಯಲ್ಲಿ ಆರೋಗ್ಯ ಭಾರತಿ ಮಂಗಳೂರು ವಿಭಾಗ, ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ (ರಿ) ಮಂಗಳೂರು ಮತ್ತು ವೇದಮಾಯು ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ಧನ್ವಂತರಿ ಜಯಂತಿಯನ್ನು ಆಚರಿಸಲಾಯಿತು. ವೇದಮಾಯು ಆಸ್ಪತ್ರೆಯ ಆಯುರ್ವೇದ ಫಿಸಿಷಿಯನ್ ಡಾ|| ಕೇಶವರಾಜ್ ಅವರು ಧನ್ವಂತರಿ ಜಯಂತಿ ಆಚರಣೆಯ ಉದ್ದೇಶ ಮತ್ತು ಅಗತ್ಯತೆಯ ಬಗ್ಗೆ ಮಾಹಿತಿ ನೀಡಿದರು.
ನಮ್ಮ ಜೀವನ ಶೈಲಿಯನ್ನು ಬದಲಿಸಿ ಆಹಾರ ಪದ್ಧತಿಯನ್ನು ಬದಲಿಸಿಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳೋಣ ಎಂದು ಕರೆ ನೀಡಿದರು. ಆರೋಗ್ಯ ಭಾರತಿ ಮಂಗಳೂರು ಇದರ ಗೌರವ ಅಧ್ಯಕ್ಷರಾದ ಶ್ರೀ ಡಾ|| ಮುರಲೀ ಮೋಹನ್ ಚೂಂತಾರು ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು ಮತ್ತು ಶುಭ ಹಾರೈಸಿದರು.
ಆರೋಗ್ಯ ಭಾರತಿ ವಿಭಾಗ ಸಂಯೋಜಕರಾದ ಶ್ರೀ ಪುರುಷೋತ್ತಮ್ ದೇವಸ್ಯ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಮನೆ ಮನೆಗಳಲ್ಲಿ ಧನ್ವಂತರಿ ದೇವರ ಸ್ಮರಣೆ ದಿನ ನಿತ್ಯ ನಡೆಯುವಂತಾಗಲಿ ಎಂದು ಹಾರೈಸಿದರು. ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನದ ಸದಸ್ಯೆ ಡಾ|| ರಾಜಶ್ರೀ ಮೋಹನ್ ಅವರು ವಂದಿಸಿದರು. ವೇದಮಾಯು ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
Post a Comment