ನವದೆಹಲಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಕೋವಿಡ್ ದೃಢಪಟ್ಟಿದ್ದ ಹಿನ್ನೆಲೆ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಅಕ್ಟೋಬರ್ 01 ರಂದು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಎರಡೇ ದಿನದಲ್ಲಿ ರಾಜ್ಯಪಾಲರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆ ಮತ್ತೊಮ್ಮೆ ವೈದ್ಯಕೀಯ ತಪಾಸಣೆ ನಡೆಸಿ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ
Post a Comment