ಮಂಗಳೂರು: ಕಾಂತಾರ ಸಿನಿಮಾವನ್ನು ಮಂಗಳೂರಿನಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಕುಟುಂಬ ಸಮೇತವಾಗಿ ಬಂದು ವೀಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದರು.
ಕಾಂತಾರಾ ಚಿತ್ರ ವೀಕ್ಷಿಸಿದ ಬಳಿಕ ಮಾತನಾಡಿದ ಅವರು, ನಾನು ಸಿನಿಮಾವನ್ನು ನೋಡದೇ ಬಹಳ ದಿನವಾಗಿತ್ತು. ಕಾಂತಾರದಲ್ಲಿ ದೈವಾರಾಧನೆಯನ್ನು ರಿಷಬ್ ಶೆಟ್ಟಿ ಬಹಳ ಚೆನ್ನಾಗಿ ತೋರಿಸಿದ್ದಾರೆ. ಚಿತ್ರದಲ್ಲಿ ಯುವಕರಿಗೆ ಹೊಸ ಕಥೆ, ಹಳೆಯ ಸ್ಮರಣೆ ಆಗುತ್ತದೆ. ಈ ಚಿತ್ರದಲ್ಲಿ ಹೊಸ ದೃಷ್ಠಿಕೋನವಿದೆ ಎಂದರು.
Post a Comment