ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಡಾ.ಕೆ.ವಿ.ರಾಜೇಂದ್ರ ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಕ

ಡಾ.ಕೆ.ವಿ.ರಾಜೇಂದ್ರ ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಕ

 


ಮೈಸೂರು: ಮೈಸೂರಿನ ಜಿಲ್ಲಾಧಿಕಾರಿಯಾಗಿದ್ದ ಡಾ.ಬಗಾದಿ ಗೌತಮ್ ಅವರನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಇದೀಗ ಡಾ.ಕೆ.ವಿ. ರಾಜೇಂದ್ರ ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕಳೆದ ಒಂದೂವರೆ ವರ್ಷದಿಂದ ಡಾ.ಬಗಾದಿ ಗೌತಮ್ ಮೈಸೂರಿನ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಇತ್ತೀಚೆಗೆ ಮೈಸೂರು ದಸರಾ ಮಹೋತ್ಸವ ಯಶಸ್ವಿಯಾಗಿ ನೆರವೇರುವಂತೆ ನೋಡಿಕೊಂಡಿದ್ದರು.

2020ರ ಜುಲೈ 30ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಡಾ.ಕೆ.ವಿ. ರಾಜೇಂದ್ರ ಅವರು ಸುಮಾರು ಎರಡು ವರ್ಷ ಜಿಲ್ಲೆಯಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದಾರೆ.

ಕೋವಿಡ್ ನಂತಹ ಕ್ಲಿಷ್ಟಕರ ಸನ್ನಿವೇಶದಲ್ಲಿ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡು ಸಮರ್ಥವಾಗಿ ನಿಭಾಯಿಸಿದ್ದರು.


ದಕ್ಷಿಣ ಕನ್ನಡಕ್ಕೆ ನೂತನ ಜಿಲ್ಲಾಧಿಕಾರಿಯಾಗಿ ಡಾ.ಕುಮಾರ್ ನೇಮಕ


0 Comments

Post a Comment

Post a Comment (0)

Previous Post Next Post