ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಗಂಗಾವತಿ: ಅಂಜನಾದ್ರಿ ಬೆಟ್ಟದಲ್ಲಿ ಗೋಪೂಜೆ, ಶಾಸಕ ಮುನವಳ್ಳಿ ಭಾಗಿ

ಗಂಗಾವತಿ: ಅಂಜನಾದ್ರಿ ಬೆಟ್ಟದಲ್ಲಿ ಗೋಪೂಜೆ, ಶಾಸಕ ಮುನವಳ್ಳಿ ಭಾಗಿ


ಗಂಗಾವತಿ: ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ದೀಪಾವಳಿಯ ಪಾಡ್ಯದ ಪ್ರಯುಕ್ತ ಮುಜರಾಯಿ ಇಲಾಖೆ ವತಿಯಿಂದ ಗೋ ಪೂಜಾ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.


ಈ ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ ಪರಣ್ಣ ಮುನವಳ್ಳಿ ಅವರು ಭಾಗಿಯಾಗಿ ಗೋವುಗಳಿಗೆ ಪೂಜೆ ಮಾಡುವ ಮೂಲಕ ನೈವೇದ್ಯ ನೀಡಿ ಆಶಿರ್ವಾದ ಪಡೆದುಕೊಂಡರು


ನಂತರ ಪಂಪಾ ಸರೋವರದ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನಕ್ಕೆ ಬೇಟಿ ನೀಡಿ ಅಮ್ಮನವರ ಆಶಿರ್ವಾದ ಪಡೆದುಕೊಂಡು ಕ್ಷೇತ್ರದ ಜನತೆಯ ಒಳಿತಿಗಾಗಿ ವಿಶೇಷ ಪ್ರಾರ್ಥನೆ ಪೂಜೆ ಸಲ್ಲಿಸಿದರು.


ಈ ಸಂಧರ್ಭದಲ್ಲಿ ತಹಶಿಲ್ದಾರರಾದ u ನಾಗರಾಜ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಸಿದ್ದರಾಮಯ್ಯ ಸ್ವಾಮಿ, ಯುವಮೋರ್ಚ ಗ್ರಾ ಮಂಡಲ ಪ್ರಧಾನ ಕಾರ್ಯದರ್ಶಿ ರುದ್ರೇಶ್, ಶಕ್ತಿ ಕೇಂದ್ರದ ಅಧ್ಯಕ್ಷರಾದ ಚೆಂದ್ರಶೇಖರ್, ಮುಖಂಡರಾದ ಯಂಕಪ್ಪ ಕಟ್ಟಿಮನಿ, ದೇವಸ್ಥಾನದ ಅರ್ಚಕರಾದ ಫನೀಂದ್ರ ಆಚಾರ್ಯ ಹಾಗೂ ಗಣ್ಯರು, ಪಕ್ಷದ ಮುಖಂಡರು, ಹಿರಿಯರು, ಹಿತೈಷಿಗಳು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


web counter

0 تعليقات

إرسال تعليق

Post a Comment (0)

أحدث أقدم