ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ರಾಜ್ಯ ಸರ್ಕಾರದಿಂದ ದೈವನರ್ತಕರಿಗೆ ಗುಡ್ ನ್ಯೂಸ್

ರಾಜ್ಯ ಸರ್ಕಾರದಿಂದ ದೈವನರ್ತಕರಿಗೆ ಗುಡ್ ನ್ಯೂಸ್

 


ಬೆಂಗಳೂರು : ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ಕಾಂತಾರ ಸಿನಿಮಾ ಈ ಮಟ್ಟಿಗೆ ಯಶಸ್ಸು ಕಾಣಲು ಪ್ರಮುಖ ಕಾರಣ ಸಿನಿಮಾದಲ್ಲಿರುವ ಭೂತಾರಾಧನೆ.


ಇದೀಗ ಭೂತಾರಾಧನೆ ಮಾಡುವ ದೈವನರ್ತಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, 60 ವರ್ಷ ತುಂಬಿದ ದೈವ ನರ್ತಕರಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಮಾಸಾಶನ ನೀಡಲು ಮುಂದಾಗಿದೆ.


ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ದೈವ ನರ್ತನೆ, ಭೂತಾರಾಧನೆ ಮಾಡುವವರ ಸಂಖ್ಯೆ ಹೆಚ್ಚಿದೆ.


ಇವರು ದೈವಾರಾಧನೆ ಮಾಡಿಕೊಳ್ಳುತ್ತಲೇ ತಮ್ಮ ಕಸುಬು ನಡೆಸುತ್ತಿದ್ದಾರೆ.


ಹಾಗಾಗಿ ದೈವ ನರ್ತನ ಮಾಡುತ್ತಿರುವ 60 ವರ್ಷ ಮೀರಿದವರಿಗೆ ಮಾಸಾಶನ ನೀಡುವ ನಿರ್ಧಾರವನ್ನು ನಮ್ಮ ಸರ್ಕಾರ ತೆಗೆದುಕೊಂಡಿದೆ ಎಂದು ತಿಳಿಸಿದ್ದಾರೆ.


0 Comments

Post a Comment

Post a Comment (0)

Previous Post Next Post