ಬೆಂಗಳೂರು: ನಾದಬ್ರಹ್ಮ' ಹಂಸಲೇಖ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ.
ಈ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರಿನ ರಾಜಾಜಿನಗರ ಫಸ್ಟ್ ಬ್ಲಾಕ್ನಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ಹಂಸಲೇಖ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಹಂಸಲೇಖ ಅವರ ಆರೋಗ್ಯ ತಪಾಸಣೆ ಮಾಡಿರುವ ವೈದ್ಯರು ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ. ಈ ವಿಷಯ ತಿಳಿದು ಆಪ್ತರು ಹಾಗೂ ಅಭಿಮಾನಿಗಳು ನಿಟ್ಟುಸಿರು ಬಿಡುವಂತಾಗಿದೆ.
ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಎದೆ ನೋವು ಕಾಣಿಸಿಕೊಂಡಿದೆ. ಈ ಹಿಂದೆ ಹಂಸಲೇಖ ಅವರು ಓಪನ್ ಹಾರ್ಟ್ ಸರ್ಜರಿ ಮಾಡಿಸಿಕೊಂಡಿದ್ದರು. ಈಗ ಒಂದು ದಿನ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ.
ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಲ್ಲಿ ಹಂಸಲೇಖ ಉಳಿದುಕೊಂಡಿದ್ದಾರೆ.
Post a Comment