ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಹಂಸಲೇಖ ಅವರಿಗೆ ಆರೋಗ್ಯ ಸಮಸ್ಯೆ

ಹಂಸಲೇಖ ಅವರಿಗೆ ಆರೋಗ್ಯ ಸಮಸ್ಯೆ

 


ಬೆಂಗಳೂರು: ನಾದಬ್ರಹ್ಮ' ಹಂಸಲೇಖ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.


ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ.


ಈ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರಿನ ರಾಜಾಜಿನಗರ ಫಸ್ಟ್ ಬ್ಲಾಕ್​ನಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ಹಂಸಲೇಖ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. 


ಹಂಸಲೇಖ ಅವರ ಆರೋಗ್ಯ ತಪಾಸಣೆ ಮಾಡಿರುವ ವೈದ್ಯರು ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ. ಈ ವಿಷಯ ತಿಳಿದು ಆಪ್ತರು ಹಾಗೂ ಅಭಿಮಾನಿಗಳು ನಿಟ್ಟುಸಿರು ಬಿಡುವಂತಾಗಿದೆ. 


ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಎದೆ ನೋವು ಕಾಣಿಸಿಕೊಂಡಿದೆ. ಈ ಹಿಂದೆ ಹಂಸಲೇಖ ಅವರು ಓಪನ್​ ಹಾರ್ಟ್ ಸರ್ಜರಿ ಮಾಡಿಸಿಕೊಂಡಿದ್ದರು. ಈಗ ಒಂದು ದಿನ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ. 


ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಲ್ಲಿ ಹಂಸಲೇಖ ಉಳಿದುಕೊಂಡಿದ್ದಾರೆ.


0 تعليقات

إرسال تعليق

Post a Comment (0)

أحدث أقدم