ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಶಾಸ್ತ್ರೋಕ್ತವಾಗಿ ಬಂದ್

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಶಾಸ್ತ್ರೋಕ್ತವಾಗಿ ಬಂದ್

 


ಹಾಸನ: ವರ್ಷಕ್ಕೆ ಒಮ್ಮೆ ದೇಗುಲದ ಬಾಗಿಲು ತೆರೆಯಲಿದ್ದು, ನಗರದ ಅಧಿದೇವತೆ ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲನ್ನು  ಗುರುವಾರ ಮಧ್ಯಾಹ್ನ 12.47ಕ್ಕೆ ಶಾಸ್ತ್ರೋಕ್ತವಾಗಿ ಮುಚ್ಚಲಾಯಿತು.  ವರ್ಷದ ಬಳಿಕ ಅಂದರೆ ಅ.13ರಂದು ದೇವಸ್ಥಾನದ ಗರ್ಭಗುಡಿ ಬಾಗಿಲನ್ನು ತೆರೆಯಲಾಗಿತ್ತು.

ಲಕ್ಷಾಂತರ ಭಕ್ತರು ಹಾಸನಾಂಬೆಯ ವಿಶ್ವರೂಪ ದರ್ಶನ ಪಡೆದಿದ್ದರು. ಸಂಪ್ರದಾಯದಂತೆ ಇಂದು ಗರ್ಭಗುಡಿಯ ಬಾಗಿಲು ಮುಚ್ಚಲಾಯಿತು.

ಮುಂದಿನ ವರ್ಷ ಅಂದರೆ 2023ರ ನವೆಂಬರ್​ 2ರಿಂದ ನವೆಂಬರ್​ 15ರ ವರೆಗೆ ಹಾಸನಾಂಬೆ ಜಾತ್ರಾ ಮಹೋತ್ಸವ ನಡೆಯಲಿದೆ. ಆಗ ಮತ್ತೆ ಗರ್ಭಗುಡಿಯ ಬಾಗಿಲನ್ನು ತೆರೆಯಲಾಗುತ್ತದೆ. ವರ್ಷಕ್ಕೊಮ್ಮೆ ಮಾತ್ರ ಹಾಸನಾಂಬೆ ದೇವಿ ದರ್ಶನ ಕರುಣಿಸಲಿದ್ದಾಳೆ.

ಕೊನೆಯ ದಿನ ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ವ್ಯವಸ್ಥೆ ಇರಲಿಲ್ಲ. ಆದರೂ ನೂರಾರು ಭಕ್ತರು ಆಗಮಿಸಿದ್ದರು. ಅವರಿಗೆ ದೇವಿ ದರ್ಶನ ಪಡೆಯಲು ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ಅವಕಾಶ ಮಾಡಿ ಕೊಟ್ಟಿತು.


0 Comments

Post a Comment

Post a Comment (0)

Previous Post Next Post