ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪ್ರತಿ ಮನೆಗಳಲ್ಲಿ ಕನ್ನಡದ ಬಾವುಟ ಹಾರಿಸಬೇಕು- ಡಾ.ಮಹೇಶ ಜೋಶಿ

ಪ್ರತಿ ಮನೆಗಳಲ್ಲಿ ಕನ್ನಡದ ಬಾವುಟ ಹಾರಿಸಬೇಕು- ಡಾ.ಮಹೇಶ ಜೋಶಿ

 


ಬೆಂಗಳೂರು: ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಹಿನ್ನೆಲೆ ಪ್ರತಿ ಮನೆಗಳಲ್ಲಿ ಕನ್ನಡದ ಬಾವುಟ ಹಾರಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ ಜೋಶಿ ಕರೆ ಕೊಟ್ಟಿದ್ದಾರೆ.


ಈ ಬಗ್ಗೆ ಮಾತನಾಡಿದ ಅವರು, 'ಕನ್ನಡದ ಕಣ್ವ ಖ್ಯಾತಿಯ ಬಿ.ಎಂ.ಶ್ರೀಕಂಠಯ್ಯನವರು ರಚಿಸಿದ ಏರಿಸಿ ಹಾರಿಸಿ ಕನ್ನಡದ ಬಾವುಟ, ಹಾರಿಸಿ ತೋರಿಸಿ ಕೆಚ್ಚೆದೆಯ ಬಾವುಟ ಎನ್ನುವಂತೆ ಈ ಬಾರಿ ಅರ್ಥಪೂರ್ಣವಾಗಿ ಕನ್ನಡ ಪ್ರೇಮ ಮೆರೆಯೋಣ, ಈ ಬಾರಿ ಕನ್ನಡ ರಾಜ್ಯೋತ್ಸವ ದಂದು ಪ್ರತಿ ಮನೆಗಳ ಮೇಲೆ ಕನ್ನಡಧ್ವಜ ಹಾರಿಸುವಂತೆ ಜೋಶಿ ಕರೆ ನೀಡಿದ್ದಾರೆ.


ಮೈಸೂರು ರಾಜ್ಯವು 1956ರ ನವೆಂಬರ್ 1ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ.


 ಪ್ರತಿ ವರ್ಷದ ನ.1 ರಂದು ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.


ರಾಜ್ಯೋತ್ಸವ ದಿನವನ್ನು ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ರಜಾದಿನವೆಂದು ಪಟ್ಟಿ ಮಾಡಲಾಗಿದೆ ಮತ್ತು ವಿಶ್ವದಾದ್ಯಂತ ಕನ್ನಡಿಗರು ಇದನ್ನು ಆಚರಿಸುತ್ತಾರೆ.


 ರಾಜ್ಯೋತ್ಸವವನ್ನು ಕರ್ನಾಟಕದಲ್ಲಿರುವ ಬಹುತೇಕ ಹಿಂದೂಗಳು, ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ಧರ್ಮಬೇಧವಿಲ್ಲದೆ ಆಚರಿಸುತ್ತಾರೆ ಹಾಗೂ ಸರ್ಕಾರ ಮೆರವಣಿಗೆ ಆಟೋ ರಿಕ್ಷಾಗಳು ಮತ್ತು ಇತರೆ ವಾಹನಗಳು ಕನ್ನಡ ಧ್ವಜದ ಬಣ್ಣಗಳಾದ ಕೆಂಪು ಮತ್ತು ಹಳದಿ ವರ್ಣಗಳ ಬಾವುಟ ದೊಂದಿಗೆ ಅಲಂಕರಿಸಲಾಗಿರುತ್ತವೆ. 


ಇನ್ನು ರಾಜ್ಯ ಸರ್ಕಾರ ಕೂಡ ಕರ್ನಾಟಕ ರಾಜ್ಯೋತ್ಸವದ ದಿನ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಪ್ರಶಸ್ತಿ ಪ್ರಕಟ ಪಡಿಸುತ್ತದೆ.



0 Comments

Post a Comment

Post a Comment (0)

Previous Post Next Post