ಬೆಂಗಳೂರು: ನಾಳೆ ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರಿಗೆ ರಾಜ್ಯ ಸರ್ಕಾರ ಘೋಷಣೆ ಮಾಡಿದ್ದು, ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಿದೆ.
ಇಂದು ಪುನೀತ್ ರಾಜ್ ಕುಮಾರ್ ಹಾಗೂ ರಾಘವೇಂದ್ರ ರಾಜ್ ಕುಮಾರ್ ನಿವಾಸಕ್ಕೆ ತೆರಳಿ, ಕಂದಾಯ ಸಚಿವ ಆರ್ ಅಶೋಕ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಗಮಿಸುವಂತೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದರು.
ನಾಳೆ ವಿಧಾನಸೌಧದ ಮುಂಭಾಗದಲ್ಲಿ ಬೃಹತ್ ಕಾರ್ಯಕ್ರಮದಲ್ಲಿ ದಿವಂಗತ ನಟ ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಪ್ರದಾನ ಮಾಡಲಿದೆ.
ಈ ಕಾರ್ಯಕ್ರಮಕ್ಕೆ ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್, ತೆಲುಗು ಸ್ಟಾರ್ ನಟ ಜೂನಿಯರ್ ಎನ್ ಟಿ ಆರ್ ಹಾಗೂ ಸುಧಾಮೂರ್ತಿ ವಿಶೇಷ ಅತಿಥಿಗಳಾಗಿ ಭಾಗಿಯಾಗಲಿದ್ದಾರೆ.
ನಾಳೆ ಸಂಜೆ 4 ಗಂಟೆಗೆ ವಿಧಾನಸೌಧದ ಮುಂಭಾಗದಲ್ಲಿ ದಿವಂಗತ ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರದಾನ ಮಾಡಲಿದ್ದಾರೆ.
Post a Comment