ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಅಡಿಕೆ ತೋಟಗಳಲ್ಲಿ ಎಲೆ ಚುಕ್ಕೆ ರೋಗ; ಬೆಳೆ ಸಂಪೂರ್ಣ ನಾಶವಾಗುವ ಅಪಾಯಕ್ಕೆ ತುತ್ತಾಗಿದೆ- ಗೃಹ ಸಚಿವ ಆರಗ ಜ್ಞಾನೇಂದ್ರ

ಅಡಿಕೆ ತೋಟಗಳಲ್ಲಿ ಎಲೆ ಚುಕ್ಕೆ ರೋಗ; ಬೆಳೆ ಸಂಪೂರ್ಣ ನಾಶವಾಗುವ ಅಪಾಯಕ್ಕೆ ತುತ್ತಾಗಿದೆ- ಗೃಹ ಸಚಿವ ಆರಗ ಜ್ಞಾನೇಂದ್ರ

 


ಬೆಂಗಳೂರು: ಅಡಿಕೆ ಬೆಳೆ, ಎಲೆ ಚುಕ್ಕೆ ರೋಗದಿಂದ, ನಲುಗಿದ್ದು, ನಿಯಂತ್ರಣ ಬಗ್ಗೆ ಕೇಂದ್ರ ಸರಕಾರದ ಗಮನ ಸೆಳೆಯಲು, ದೆಹಲಿಗೆ ನಿಯೋಗವೊಂದನ್ನು, ಕೊಂಡೊಯ್ಯಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ. 

ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ಎಲೆ ಚುಕ್ಕೆ ರೋಗವು, ಇಡೀ ಮಲೆನಾಡು ಭಾಗದ ಅಡಿಕೆ ತೋಟಗಳಲ್ಲಿ ವ್ಯಾಪಕವಾಗಿ ಹಬ್ಬಿದ್ದು, ಅಡಿಕೆ ಬೆಳೆ ಸಂಪೂರ್ಣವಾಗಿ ನಾಶವಾಗುವ ಅಪಾಯಕ್ಕೆ ತುತ್ತಾಗಿದೆ.

ಅಡಿಕೆ ಬೆಳೆಯನ್ನು ಉಳಿಸಿ, ಬೆಳೆಗಾರರ ರಕ್ಷಣೆಗೆ ಬರಬೇಕಾದ ತುರ್ತು ಅಗತ್ಯವಿದ್ದು, ತಕ್ಷಣ ಪರಿಹಾರ ಕಂಡು ಕೊಳ್ಳುವ ನಿಟ್ಟಿನಲ್ಲಿ, ಕೇಂದ್ರ ಕೃಷಿ ಸಚಿವ ಶ್ರೀ ನರೇಂದ್ರ ಸಿಂಗ್ ತೋಮರ್ ಹಾಗೂ ಇತರರನ್ನು ಭೇಟಿಯಾಗಿ, ಚರ್ಚಿಸಲಾಗುವುದು, ಎಂದು ತಿಳಿಸಿದರು. 

ಎಲೆ ಚುಕ್ಕೆ ರೋಗದ ನಿಯಂತ್ರಣ ಬಗ್ಗೆ, ಸಂಶೋಧನೆ, ರೈತರಿಗೆ ಪರಿಹಾರ ಹಾಗೂ ಇತರ ಮಾರ್ಗೋಪಾಯಗಳನ್ನು ಕಂಡುಕೊಳ್ಳುವ ಬಗ್ಗೆಯೂ, ಚರ್ಚಿಸಲಾಗುವುದು, ಎಂದು ಸಚಿವರು ಮಾಹಿತಿ ನೀಡಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

0 Comments

Post a Comment

Post a Comment (0)

Previous Post Next Post