ಉಡುಪಿ: ತುಳುನಾಡಿನ ಬಹು ಜನರ ನಂಬುಗೆಯ ಕೊರಗಜ್ಜ ದೈವ ಮತ್ತೆ ಪವಾಡ ಮೆರೆದಿದೆ. ವೈದ್ಯರೇ ಮಗು ಬದುಕುವ ಭರವಸೆಯನ್ನು ನೀಡದ ಸಂದರ್ಭದಲ್ಲಿ ಮಗುವಿನ ಹೆತ್ತವರು ಕೊರಗಜ್ಜನಲ್ಲಿ ಪ್ರಾರ್ಥಿಸಿ ಮಗುವಿನ ಹಣೆಗೆ ಕರಿಗಂಧ ಹಚ್ಚಿದ ಕೆಲವೇ ಗಂಟೆಗಳಲ್ಲಿ ಮಗುವಿನ ಆರೋಗ್ಯದಲ್ಲಿ ದಿಢೀರ್ ಚೇತರಿಕೆ ಕಂಡ ಘಟನೆಯೊಂದು ಉಡುಪಿಯಲ್ಲಿ ನಡೆದಿದೆ.
ಸಾಗರ ಮೂಲದ ನಾಗಶ್ರೀ ಅವರ ನಾಲ್ಕು ತಿಂಗಳ ಪುಟ್ಟ ಹೆಣ್ಣು ಮಗುವಿಗೆ ವಿಪರೀತ ಜ್ವರ ಕಂಡು ಬಂದಿದ್ದು, ಎರಡು ದಿನ ಕಳೆದರೂ ಜ್ವರ ಕಡಿಮೆಯಾಗದೆ ಮಗು ಅಳು ನಿಲ್ಲಿಸುತ್ತಿರಲ್ಲಿಲ್ಲ. ಹೀಗಾಗಿ ಕುಂದಾಪುರದ ಅಸ್ಪತ್ರೆಗೆ ದಾಖಲಿಸಲಾಗಿತ್ತು.
ಅಸ್ಪತ್ರೆಯಲ್ಲಿ ಮಗುವಿಗೆ ಪಿಡ್ಸ್ ಇರುವುದಾಗಿ ಹೇಳಿ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲದ ಅಸ್ಪತ್ರೆ ಕೆಎಂಸಿಗೆ ದಾಖಲಿಸಲಾಯಿತು.
ಐಸಿಯುನಲ್ಲಿದ್ದ ಮಗುವಿನ ಅರೋಗ್ಯ ಚಿಂತಾಜನಕವಾಗಿದ್ದು, ಪದೇ ಪದೇ ಮಗುವಿನ ಹೃದಯ ಸ್ತಬ್ಧವಾಗುತ್ತಿರುವುದರ ಬಗ್ಗೆ ವೈದರು ಕುಟುಂಬಸ್ಥರಿಗೆ ಮಾಹಿತಿ ನೀಡಿದರು.
ಕಂಗಾಲಾಗಿದ್ದ ಕುಟುಂಬಕ್ಕೆ ಓರ್ವ ವ್ಯಕ್ತಿ ಕೊರಗಜ್ಜ ಕ್ಷೇತ್ರದಲ್ಲಿ ಪ್ರಾರ್ಥನೆ ಸಲ್ಲಿಸುವಂತೆ ಹೇಳಿದ ಇದರಿಂದಾಗಿ ಮಗುವಿನ ಹೆತ್ತವರು ಇಂದ್ರಾಳಿ, ಎಂಜಿಎಂ ಹಾಸ್ಟೆಲ್ ಬಳಿಯಿರುವ ಕೊರಗಜ್ಜನ ಕ್ಷೇತ್ರಕ್ಕೆ ಬಂದು ಪ್ರಾರ್ಥನೆ ಸಲ್ಲಿಸಿ ಗಂಧ ಪ್ರಸಾದ ಪಡೆದು ತೆರಳಿದ್ದರು.
ಕೊರಗಜ್ಜನ ಕರಿಗಂಧವನ್ನು ಮಗುವಿನ ಹಣೆಗೆ ಹಚ್ಚುತ್ತಿದ್ದಂತೆಯೇ, ಗಂಭೀರ ಸ್ಥಿತಿಯಲ್ಲಿದ್ದ ಪುಟ್ಟ ಕಂದಮ್ಮನ ಅರೋಗ್ಯ ದಿಢೀರಾಗಿ ಚೇತರಿಕೆ ಕಾಣಿಸಿಕೊಳ್ಳಲು ಪ್ರಾರಂಭಿಸಿತ್ತು.
ಹೃದಯ ಬಡಿತವೇ ನಿಂತು ಹೋಯಿತು ಎಂದಿದ್ದ ಮಗು ಮತ್ತೆ ನಗುತ್ತಿರುವುದನ್ನ ಕಂಡ ಕುಟುಂಬಸ್ಥರ ಸಂತೋಷ ಮುಗಿಲು ಮುಟ್ಟಿದೆ.
ಇದಕ್ಕೆಲ್ಲ ಕಾರಣ ನಂಬಿದ ಕೊರಗಜ್ಜ ಎನ್ನುವುದು ಕುಟುಂಬಸ್ಥರ ನಂಬಿಕೆ. ಹೀಗಾಗಿ ಅಸ್ಪತ್ರೆಯಿಂದ ನೇರವಾಗಿ ಇಂದ್ರಾಳಿ ಬಳಿಯ ಕೊರಗಜ್ಜನ ಕ್ಷೇತ್ರಕ್ಕೆ ಬಂದು ಮಗುವನ್ನು ಕೊರಗಜ್ಜ ಸ್ವಾಮಿಯ ಮುಂದಿಟ್ಟು ಪ್ರಾರ್ಥನೆ ಸಲ್ಲಿಸಿ ಗಂಧ ಪ್ರಸಾದ ಪಡೆದುಕೊಂಡರು.
Post a Comment