ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಪ್ರಕರಣ ಪತ್ತೆಯಾಗಿದೆ. ಮಸ್ಕತ್‌ನಿಂದ ಬಂದ ಇಬ್ಬರು ಪ್ರಯಾಣಿಕರು ಆಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದು, ಅವರಿಂದ 38,20,160 ರೂ. ಮೌಲ್ಯದ 752 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಭಟ್ಕಳ ಮೂಲದ ಈ ಇಬ್ಬರು ಪ್ರಯಾಣಿಕರು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಮಸ್ಕತ್‌ನಿಂದ ಗುರುವಾರ ಬಂದಿದ್ದರು.
ತಪಾಸಣೆ ವೇಳೆ ಅವರ ಬಳಿ 38,20,160 ರೂ. ಮೌಲ್ಯದ 24 ಕ್ಯಾರೆಟ್‌ನ 752 ಗ್ರಾಂ ಚಿನ್ನ ಪತ್ತೆಯಾಗಿತ್ತು.
ಇಬ್ಬರ ವಿರುದ್ದ ಪ್ರತ್ಯೇಕ ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿಗಳು ಚಿನ್ನವನ್ನು ಐದು ಅಂಡಾಕಾರದ ಪ್ಯಾಕೆಟ್‌ಗಳಲ್ಲಿ ಸುತ್ತಿ ದೇಹದ ಒಳಭಾಗದಲ್ಲಿಟ್ಟು ಸಾಗಾಟ ಮಾಡಲು ಯತ್ನಿಸಿದ್ದರು. ಅಧಿಕಾರಿಗಳು ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
Post a Comment