ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮಂಗಳೂರು; ಅಪಾರ್ಟ್ಮೆಂಟ್ ನಲ್ಲಿ ದಂಪತಿ ಆತ್ಮಹತ್ಯೆ

ಮಂಗಳೂರು; ಅಪಾರ್ಟ್ಮೆಂಟ್ ನಲ್ಲಿ ದಂಪತಿ ಆತ್ಮಹತ್ಯೆ

 


ಮಂಗಳೂರು- ಇಲ್ಲಿನ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮರೋಳಿ ಬಳಿಯ ಅಪಾರ್ಟ್ ಮೆಂಟ್ ನಲ್ಲಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆಯೊಂದು ಬೆಳಕಿಗೆ ಬಂದಿದೆ.


ಮೃತರನ್ನು ಮಲ್ಲಿಕಾರ್ಜುನ್ ಬಸವರಾಜ್(35) ಮತ್ತು ಸೌಮ್ಯಾ ನಾಯಕ್(34) ಎಂದು ಗುರುತಿಸಲಾಗಿದೆ.

ದಂಪತಿಯ ಮೃತದೇಹ ಅವರು ವಾಸಿಸುತ್ತಿದ್ದ ಅಪಾರ್ಟ್ ಮೆಂಟ್ ನ ಕೋಣೆಯಲ್ಲಿ ಫ್ಯಾನ್ ಗೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇವರು ಒಂದೂವರೆ ವರ್ಷದ ಹಿಂದೆ ವಿವಾಹವಾಗಿದ್ದರು ಎನ್ನಲಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

0 تعليقات

إرسال تعليق

Post a Comment (0)

أحدث أقدم