ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಕರೆಯಂತೆ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಈ ಬಾರಿ ಬೆಳಕಿನ ಹಬ್ಬವನ್ನು ವಿನೂತನವಾಗಿ ಆಚರಿಸಲಾಯಿತು.
ಭಾರತೀಯ ಸೇನೆಯಲ್ಲಿ 13 ವರ್ಷಗಳ ಕಾಲ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತರಾಗಿರುವ ಪಡೀಲ್ ವೀರನಗರ ನಿವಾಸಿ ಮೇಜರ್ ವಿಜಯಚಂದ್ರ ಅವರನ್ನು ಸನ್ಮಾನಿಸಿ ಅವರ ಮನೆಯಲ್ಲಿ ಕುಟುಂಬದ ಸದಸ್ಯರೊಂದಿಗೆ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಮಂಡಲ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮದ ದೀಪಾವಳಿ ಹಬ್ಬ ಆಚರಣೆ ನಡೆಯಿತು.
ಈ ಕುರಿತು ಪ್ರತಿಕ್ರಯಿಸಿರುವ ಶಾಸಕ ಕಾಮತ್, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜೀ ಅವರು ನೀಡಿದ ಕರೆಯಂತೆ ಕಳೆದೆರಡು ವರ್ಷಗಳಿಂದ ಬಿಜೆಪಿ ಕಾರ್ಯಕರ್ತರು ಗಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ಯೋಧರ ಕುಟುಂಬದೊಂದಿಗೆ ದೀಪಾವಳಿ ಹಬ್ಬವನ್ನು ಆಚರಿಸುತಿದ್ದೇವೆ. ಮನೆ ಮಕ್ಕಳನ್ನು ದೇಶ ಸೇವೆಗಾಗಿ ಕಳುಹಿಸಿದ ಆ ಕುಟುಂಬದೊಂದಿಗೆ ಮನೆ ಮಕ್ಕಳಾಗಿ ಹಬ್ಬದ ಸಂಭ್ರಮ ಹಂಚಿಕೊಳ್ಳುವ ಮೂಲಕ ಬೆಳಕಿನ ಹಬ್ಬವನ್ನು ವೈಶಿಷ್ಟ್ಯ ಪೂರ್ಣವಾಗಿ ಆಚರಿಸಲಾಗಿದೆ ಎಂದು ಹೇಳಿದ್ದಾರೆ.
ದೇಶದ ಭದ್ರತೆಗಾಗಿ ತನ್ನ ಸರ್ವಸ್ವವನ್ನೂ ಧಾರೆಯೆರೆಯುವ ಯೋಧರನ್ನು ಗೌರವಿಸುವ ನೆಲೆಯಲ್ಲಿ ಸ್ವತಃ ಪ್ರಧಾನಿ ಶ್ರೀ ನರೇಂದ್ರ ಮೋದಿಯವರೇ ಗಡಿಯಲ್ಲಿ ಯೋಧರೊಂದಿಗೆ ದೀಪಾವಳಿ ಆಚರಿಸುತ್ತಾರೆ. ರಾಷ್ಟ್ರ ರಕ್ಷಣೆಗಾಗಿ ತಮ್ಮನ್ನೇ ಅರ್ಪಿಸಿಕೊಂಡಿರುವ ಯೋಧರ ಕುಟುಂಬದ ಜೊತೆ ಸೇರಿ ಹಬ್ಬವನ್ನು ಆಚರಿಸುವ ಮೂಲಕ ಸೈನಿಕರ ಆತ್ಮಸ್ಥೈರ್ಯ ಹೆಚ್ಚಿಸುವ ಕಾರ್ಯ ನಮ್ಮಿಂದಾಗಬೇಕು ಎಂದು ಶಾಸಕ ಕಾಮತ್ ಹೇಳಿದರು.
ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ ಅವರು ಮಾತನಾಡಿ, ಕಳೆದ 13 ವರ್ಷಗಳಿಂದ ದೇಶ ಸೇವೆಯಲ್ಲಿ ತೊಡಗಿಸಿಕೊಂಡು ಇತ್ತೀಚೆಗೆ ನಿವೃತ್ತರಾದ ಮೇಜರ್ ವಿಜಯಚಂದ್ರ ಅವರ ಕುಟುಂಬದ ಜೊತೆ ಮಂಡಲದ ಪ್ರಮುಖರು ಹಾಗೂ ಕಾರ್ಯಕರ್ತರು ದೀಪಾವಳಿ ಆಚರಿಸುವ ಮೂಲಕ ಸೈನಿಕರೊಂದಿಗೆ, ಅವರ ಕುಟುಂಬದೊಂದಿಗೆ ಹಬ್ಬವನ್ನು ಆಚರಿಸುವುದು ಹಬ್ಬದ ಮೆರಗು ಹೆಚ್ಚಿಸಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ರೂಪ ಡಿ ಬಂಗೇರ, ಉಪಾಧ್ಯಕ್ಷರಾದ ರಮೇಶ್ ಹೆಗ್ಡೆ , ಸ್ಥಳೀಯ ಕಾರ್ಪೋರೇಟರ್ ಚಂದ್ರಾವತಿ ವಿಶ್ವನಾಥ್ , ಪಾಲಿಕೆ ನಾಮ ನಿರ್ದೇಶಿತ ಸದಸ್ಯರಾದ ಭಾಸ್ಕರಚಂದ್ರ ಶೆಟ್ಟಿ, ಮಂಡಲ ಸಮಿತಿ ಸದಸ್ಯರಾದ ಮೋಹನ್ ಪೂಜಾರಿ ,ಮಂಡಲ ಸಾಮಾಜಿಕ ಜಾಲತಾಣ ಸಂಚಾಲಕರಾದ ನಿಲೇಶ್ ಕಾಮತ , ಸಹ ಸಂಚಾಲಕರಾದ ಅಶ್ವಿತ್ ಕೊಟ್ಟಾರಿ , ಪ್ರಮುಖರಾದ ಶಬರೀಶ್ ,ಶಕ್ತಿ ಕೇಂದ್ರದ ಪ್ರಮುಖರಾದ ಗೀತಾನಂದ್ ಶೆಟ್ಟಿ , ಬೂತ್ ಅಧ್ಯಕ್ಷರಾದ ಸಂದೀಪ್ ಶೆಟ್ಟಿ , ಒಬಿಸಿ ಮೋರ್ಚಾ ಸದಸ್ಯರಾದ ಯಶವಂತ್ ಅಮೀನ್ ಹಾಗೂ ಕಣ್ಣೂರ್ ವಾರ್ಡಿನ ಕಾರ್ಯಕರ್ತರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
إرسال تعليق