ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮಂಗಳೂರು ; ಡಿಸಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸಲಿರುವ ನೂತನ ಕುಮಾರಿ

ಮಂಗಳೂರು ; ಡಿಸಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸಲಿರುವ ನೂತನ ಕುಮಾರಿ

 


ಮಂಗಳೂರು: ಬಿಜೆಪಿ ಯುವ ಮುಖಂಡ ದಿ.ಪ್ರವೀಣ್ ನೆಟ್ಟಾರು ಪತ್ನಿ ನೂತನಕುಮಾರಿ ಅವರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾದರು.


ಗುರುವಾರ ಇಂದು ಬೆಳಿಗ್ಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರಿಂದ ನೇಮಕಾತಿ ಆದೇಶಪತ್ರವನ್ನು ಅವರು ಸ್ವೀಕರಿಸಿದರು.


ಜಿಲ್ಲಾಧಿಕಾರಿ ಕಚೇರಿಯ ಮುಖ್ಯಮಂತ್ರಿಗಳ ಪರಿಹಾರ ನಿಧಿ ವಿಭಾಗದಲ್ಲಿ ಸಹಾಯಕಿಯಾಗಿ ಅವರು ಕಾರ್ಯನಿರ್ವಹಿಸಲಿದ್ದಾರೆ.

ನೂತನಕುಮಾರಿ ಅವರಿಗೆ ಬೆಂಗಳೂರಿನ ಮುಖ್ಯಮಂತ್ರಿ ಕಚೇರಿಯಲ್ಲಿ ಗ್ರೂಪ್ 'ಸಿ' ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಾಗಿತ್ತು. ಆದರೆ, ಅವರು ಮಂಗಳೂರಿನಲ್ಲೇ ಕರ್ತವ್ಯ ನಿರ್ವಹಿಸಲು ಅವಕಾಶ ನೀಡುವಂತೆ ಮುಖ್ಯಮಂತ್ರಿ ಅವರಲ್ಲಿ ವಿನಂತಿಸಿಕೊಂಡ ಕಾರಣ, ಅವರ ಇಚ್ಛೆಯಂತೆ ಮಂಗಳೂರಿನಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅವಕಾಶ ಕಲ್ಪಿಸಿಕೊಡಲಾಗಿದೆ.

0 تعليقات

إرسال تعليق

Post a Comment (0)

أحدث أقدم