ಮಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯ ಬಿಡುಗಡೆಯು ಮಂಗಳೂರಿನ ಶಾರದಾ ವಿದ್ಯಾಲಯದಲ್ಲಿ ನೆರವೇರಿತು. ಅಕ್ಟೋಬರ್ 30ನೇ ತಾರೀಕಿನಂದು ಸಮ್ಮೇಳನವು ಮಂಗಳೂರಿನ ಕೊಡಿಯಾಲಬೈಲಿನ ಶಾರದಾ ವಿದ್ಯಾಲಯದಲ್ಲಿ ಜರಗಲಿದೆ. ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ಖ್ಯಾತ ಬರಹಗಾರ ಹಾಗೂ ರಂಗಕರ್ಮಿ ಡಾ. ನಾ.ದಾಮೋದರ ಶೆಟ್ಟಿಯವರು ವಹಿಸಲಿರುವರು.
ಶಾರದಾ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಪ್ರೊ. ಎಂ.ಬಿ. ಪುರಾಣಿಕರು ಆಮಂತ್ರಣ ಪತ್ರವನ್ನು ಬಿಡುಗಡೆಗೊಳಿಸಿ ಸಮ್ಮೇಳನವು ಯಶಸ್ವಿಯಾಗಿ ನೆರವೇರಲಿ ಎಂದು ಹಾರೈಸಿದರು. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಶ್ರೀನಾಥ ಎಂ.ಪಿ. ಯವರು ಸಮ್ಮೇಳನದ ಯಶಸ್ಸಿಗೆ ಸರ್ವರ ಸಹಕಾರವನ್ನು ಕೋರಿದರು.
ಮಂಗಳೂರು ತಾಲೂಕು ಘಟಕದ ಅಧ್ಯಕ್ಷರಾದ ಡಾ. ಮಂಜುನಾಥ ಎಸ್ ರೇವಣಕರ್, ಗೌರವ ಕಾರ್ಯದರ್ಶಿಗಳಾದ ಡಾ. ಮುರಲೀಮೋಹನ ಚೂಂತಾರು ಹಾಗೂ ಗಣೇಶ ಪ್ರಸಾದಜೀ, ನಿಕಟಪೂರ್ವ ತಾಲೂಕು ಅಧ್ಯಕ್ಷರಾದ ವಿಜಯಲಕ್ಷ್ಮೀ ಶೆಟ್ಟಿ, ಕೋಶಾಧ್ಯಕ್ಷರಾದ ಸುಬ್ರಾಯ ಭಟ್ ಹಾಗೂ ಇನ್ನಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಒಂದು ದಿನದ ಈ ಕನ್ನಡ ಹಬ್ಬದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಷಿಯೇ ಮೊದಲಾದ ಗಣ್ಯಾತಿಗಣ್ಯರು ಉಪಸ್ಥಿತರಿರುವರು. ದಿನಪೂರ್ತಿ ವಿಚಾರಗೋಷ್ಠಿ, ಕವಿಗೋಷ್ಠಿ, ಸಾಧಕರಿಗೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಕನ್ನಡದ ಈ ಸಾಹಿತ್ಯಿಕ ಹಬ್ಬದಲ್ಲಿ ಕನ್ನಡಾಭಿಮಾನಿಗಳೆಲ್ಲರೂ ಸಂಭ್ರಮದಿಂದ ಪಾಲುಗೊಳ್ಳುವಂತಾಗಬೇಕು ಎನ್ನುವುದೇ ಸಂಘಟಕರ ಆಶಯವಾಗಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
Post a Comment