ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪಟಾಕಿ ಅವಾಂತರದಿಂದ 100ಕ್ಕೂ ಅಧಿಕ ಮಂದಿಗೆ ಕಣ್ಣಿಗೆ ಹಾನಿ

ಪಟಾಕಿ ಅವಾಂತರದಿಂದ 100ಕ್ಕೂ ಅಧಿಕ ಮಂದಿಗೆ ಕಣ್ಣಿಗೆ ಹಾನಿ

 


ಬೆಂಗಳೂರು : ನಗರದಲ್ಲಿ ಪಟಾಕಿ ಅವಾಂತರಗಳಿಂದ  ಇದುವರೆಗೂ 100ಕ್ಕೂ ಅಧಿಕ ಮಂದಿ ಪಟಾಕಿ ಸಿಡಿಸಲು ಹೋಗಿ ತಮ್ಮ ಕಣ್ಣುಗಳಿಗೆ ಹಾನಿ ಮಾಡಿಕೊಂಡ ಬಗ್ಗೆ ವರದಿಯಾಗಿದೆ.

ಹಿರಿಯರು ಹಾಗೂ ಸಣ್ಣ ವಯಸ್ಸಿನ ಮಕ್ಕಳು ಪಟಾಕಿ ಹಚ್ಚಲು ಹೋಗಿ ಅಥವಾ ಯಾರೋ ಸಿಡಿಸಿದ ಪಟಾಕಿ ಸಿಡಿತದಿಂದ ತಮ್ಮ ಕಣ್ಣುಗಳಿಗೆ ಹಾನಿ ಮಾಡಿಕೊಂಡ ಘಟನೆಯೊಂದು ನಡೆದಿದ್ದು, ನಗರದ ಹಲವಾರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ನಗರದ ಮಿಂಟೋ ಕಣ್ಣಿನ ಆಸ್ಪತ್ರೆ ಒಂದರಲ್ಲೆ ಇಲ್ಲಿಯವರೆಗೆ 27 ಮಂದಿ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ, ಈಗಾಗಲೇ ಕೆಲವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಕಳುಹಿಸಿದ್ದರೆ, ಇನ್ನು ಕೆಲವರು ಒಳರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಅದೇ ರೀತಿ ನಾರಾಯಣ ನೇತ್ರಾಲಯ ಸೇರಿದಂತೆ ಹಲವಾರು ಖಾಸಗಿ ಆಸ್ಪತ್ರೆಗಳಲ್ಲಿ ನೂರಕ್ಕೂ ಅಧಿಕ ಮಂದಿ ಕಣ್ಣುಗಳಿಗೆ ಹಾನಿ ಮಾಡಿಕೊಂಡು ಚಿಕಿತ್ಸೆ ಪಡೆಯುತ್ತಿರುವುದು ಕಂಡು ಬಂದಿದೆ.


0 Comments

Post a Comment

Post a Comment (0)

Previous Post Next Post