ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಅ.25ಕ್ಕೆ ಕೇತು ಗ್ರಸ್ತ ಸೂರ್ಯಗ್ರಹಣ ಸಂಭವ; ಘಾಟಿ ದೇಗುಲ ಬಂದ್

ಅ.25ಕ್ಕೆ ಕೇತು ಗ್ರಸ್ತ ಸೂರ್ಯಗ್ರಹಣ ಸಂಭವ; ಘಾಟಿ ದೇಗುಲ ಬಂದ್

 




ಚಿಕ್ಕಬಳ್ಳಾಪುರ: ಅಕ್ಟೋಬರ್ 25ರಂದು ಕೇತು ಗ್ರಸ್ತ ಸೂರ್ಯಗ್ರಹಣ ಸಂಭವಿಸಲಿದೆ. ಈ ಹಿನ್ನೆಲೆ ದೊಡ್ಡಬಳ್ಳಾಪುರ ಬಳಿಯ ಘಾಟಿಸುಬ್ರಮಣ್ಯ ಸ್ವಾಮಿ ದೇವಾಲಯವನ್ನು ಆ ದಿನ ಬಂದ್ ಮಾಡಲಾಗುತ್ತಿದೆ.


ಈ ಬಗ್ಗೆ ದೇವಾಲಯ ಕಾರ್ಯ ನಿರ್ವಾಹಣಾಧಿಕಾರಿ ಪ್ರಕಟಣೆ ಹೊರಡಿಸಿದ್ದಾರೆ.


ಅಕ್ಟೋಬರ್ 25ರ ಮಂಗಳವಾರ ಸಂಭವಿಸುವ ಕೇತು ಗ್ರಸ್ತ ಸೂರ್ಯಗ್ರಹಣ ಹಿನ್ನಲೆ ಘಾಟಿ ಸುಬ್ರಮಣ್ಯಸ್ವಾಮಿ ದರ್ಶನಕ್ಕೆ ಬೆಳಗ್ಗೆ 10:30 ರವರೆಗೆ ಮಾತ್ರ ಅವಕಾಶ ನೀಡಲಾಗಿದೆ.

ಅನಂತರ ದೇವಾಲಯದ ಬಾಗಿಲು ಮುಚ್ಚಲಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

0 تعليقات

إرسال تعليق

Post a Comment (0)

أحدث أقدم