ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕೆರೆಗಳ ಸರದಾರ, ಆಧುನಿಕ ಭಗೀರಥ ಮಂಡ್ಯ ಜಿಲ್ಲೆಯ ರೈತ ಕಾಮೇಗೌಡ ವಿಧಿವಶ

ಕೆರೆಗಳ ಸರದಾರ, ಆಧುನಿಕ ಭಗೀರಥ ಮಂಡ್ಯ ಜಿಲ್ಲೆಯ ರೈತ ಕಾಮೇಗೌಡ ವಿಧಿವಶ

 


ಚಿತ್ರ ಕೃಪೆ: ಸುವರ್ಣನ್ಯೂಸ್‌.ಕಾಂ


ಮಂಡ್ಯ: ಆಧುನಿಕ ಭಗೀರಥ, ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕು ದಾಸನದೊಡ್ಡಿ ಗ್ರಾಮದ ಕಲ್ಮನೆ ಕಾಮೇಗೌಡ ವಿಧಿವಶರಾಗಿದ್ದಾರೆ.

16 ಕೆರೆಗಳನ್ನು ನಿರ್ಮಿಸುವ ಮೂಲಕ ದೇಶದ ಗಮನ ಸೆಳೆದಿದ್ದ ಹಾಗೂ ಈ ಕಾರಣಕ್ಕಾಗಿಯೇ ಪ್ರಧಾನಿ ನರೇಂದ್ರ ಮೋದಿಯವರ ಶ್ಲಾಘನೆಗೆ ಪಾತ್ರರಾಗಿದ್ದ ಅನಾರೋಗ್ಯದಿಂದ ಬಳಲುತ್ತಿದ್ದ 86 ವರ್ಷದ ಕಾಮೇಗೌಡ ಇಂದು ಮುಂಜಾನೆ ವಿಧಿವಶರಾಗಿದ್ದು, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಕಾಮೇಗೌಡರ ಸಾಮಾಜಿಕ ಕಾರ್ಯ ಪರಿಗಣಿಸಿ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ, ಪುರಸ್ಕಾರಗಳು ಅವರನ್ನು ಹುಡುಕಿಕೊಂಡು ಬಂದಿದ್ದವು.

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತಮ್ಮ 'ಮನ್ ಕೀ ಬಾತ್' ಕಾರ್ಯಕ್ರಮದಲ್ಲಿ ಕಾಮೇಗೌಡರ ಕಾರ್ಯವನ್ನು ಶ್ಲಾಘಿಸಿ  ಅವರನ್ನು ಆಧುನಿಕ ಭಗೀರಥ ಎಂದು ಕರೆದಿದ್ದರು. ನರೇಂದ್ರ ಮೋದಿಯವರು ಯೋಗ ದಿನಕ್ಕಾಗಿ ಮೈಸೂರಿಗೆ ಬಂದ ಸಂದರ್ಭದಲ್ಲಿ ಕಾಮೆಗೌಡರು ಅವರನ್ನು ಭೇಟಿಯಾಗುವ ಬಯಕೆ ವ್ಯಕ್ತಪಡಿಸಿದ್ದರು. ಆದರೆ ಅನಾರೋಗ್ಯದ ಕಾರಣಕ್ಕೆ ಇದು ಸಾಧ್ಯವಾಗಿರಲಿಲ್ಲ.


web counter

0 Comments

Post a Comment

Post a Comment (0)

Previous Post Next Post