ಬೆಂಗಳೂರು: ಕೋಟಿ ಕಂಠ ಗಾಯನ ಕಾರ್ಯಕ್ರಮ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದೆ.
ಇಂದು ಕಂಠೀರವ ಸ್ಟೇಡಿಯಂನಲ್ಲಿ ಕಾರ್ಯಕ್ರಮದ ಸಿದ್ಧತೆಯನ್ನು ಸಚಿವ ಸುನೀಲ್ ಕುಮಾರ್ ವೀಕ್ಷಣೆ ಮಾಡಿದ್ದಾರೆ. ನಾಳೆ ಕಂಠೀರವ ಸ್ಟೇಡಿಯಂನಲ್ಲಿ ಅದ್ಧೂರಿ ಕಾರ್ಯಕ್ರಮ ನಡೆಯಲಿದೆ.
67 ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕಾರ್ಯಕ್ರಮದ ಪೂರ್ವ ಸಿದ್ಧತೆಯನ್ನು ಸಚಿವ ಸುನಿಲ್ ಕುಮಾರ್ ಪರಿಶೀಲಿಸಿದರು.
ವಿಶ್ವದೆಲ್ಲೆಡೆ ಕೋಟಿಕಂಠದಲ್ಲಿ ಮೊಳಗಲಿದೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ.
Post a Comment