ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಎಲ್.ಕೆ ಅಡ್ವಾನಿ ಅವರನ್ನು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮಿ ಭೇಟಿ

ಎಲ್.ಕೆ ಅಡ್ವಾನಿ ಅವರನ್ನು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮಿ ಭೇಟಿ

 


ಉಡುಪಿ: ಶ್ರೀ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಯವರು ಮಾಜಿ ಉಪಪ್ರಧಾನಿ, ಬಿಜೆಪಿಯ ಹಿರಿಯ ಮುಖಂಡ ಎಲ್‌.ಕೆ. ಆಡ್ವಾಣಿ ಅವರನ್ನು ಬುಧವಾರ ದಿಲ್ಲಿಯ ಅವರ ನಿವಾಸದಲ್ಲಿ ಭೇಟಿ ಮಾಡಿ ಉಭಯಕುಶಲೋಪರಿ ನಡೆಸಿ, ದೀರ್ಘಾಯುರಾರೋಗ್ಯವನ್ನು ಶ್ರೀಕೃಷ್ಣನಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು.

ಅಯೋಧ್ಯಾ ರಾಮಜನ್ಮಭೂಮಿ ಆಂದೋಲನದಲ್ಲಿ ಆಡ್ವಾಣಿ ಯವರ ಪಾತ್ರವನ್ನು ಶ್ರೀಗಳು ನೆನಪಿಸುವ ಜೊತೆಗೆ ಆ ಹೋರಾಟದ ಫಲವಾಗಿ ಭವ್ಯ ರಾಮಮಂದಿರ ನಿರ್ಮಾಣವಾಗುತ್ತಿದೆ ಎಂದರು.


ಶ್ರೀ ವಿಶ್ವೇಶತೀರ್ಥ ಶ್ರೀಪಾದರು ತಮಗೆ ನೀಡಿದ ಸ್ಫೂರ್ತಿಯನ್ನು ಆಡ್ವಾಣಿ ಸ್ಮರಿಸಿದರು.

ಶ್ರೀ ಕೃಷ್ಣನ ಗಂಧಪ್ರಸಾದ, ಶಾಲು ಸ್ಮರಣಿಕೆ, ಫಲಮಂತ್ರಾಕ್ಷತೆಯನ್ನು ಕೊಟ್ಟು ಆಡ್ವಾಣಿಯವರನ್ನು ಶ್ರೀಗಳು ಆಶೀರ್ವದಿಸಿದರು.

ಈ ಸಂಧರ್ಭದಲ್ಲಿ ಆಡ್ವಾಣಿಯವರ ಪುತ್ರಿ ಪ್ರತಿಭಾ ಆಡ್ವಾಣಿ ಉಪಸ್ಥಿತರಿದ್ದರು.


0 تعليقات

إرسال تعليق

Post a Comment (0)

أحدث أقدم