ಬೆಂಗಳೂರು: ರಾಜ್ಯದಾದ್ಯಂತ ನವೆಂಬರ್ 6ರಂದು ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ನಡೆಯಲಿದೆ.
ಬೆಳಿಗ್ಗೆ 9.30ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಪತ್ರಿಕೆ-1, ಮಧ್ಯಾಹ್ನ 2ರಿಂದ ಸಂಜೆ 4.30ರವರೆಗೆ ಪತ್ರಿಕೆ -2 ಪರೀಕ್ಷೆ ನಡೆಯಲಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಇಲಾಖೆಯ ವೆಬ್‌ಸೈಟ್‌ನಿಂದ ಪ್ರವೇಶಪತ್ರ ಡೌನ್ ಲೋಡ್ ಮಾಡಿಕೊಳ್ಳಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.
ಪರೀಕ್ಷಾ ಮಾರ್ಗಸೂಚಿಯನ್ನೂ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.
ಜಿಲ್ಲಾ ನೋಡಲ್ ಅಧಿಕಾರಿಗಳ ಸಂಪರ್ಕ ಸಂಖ್ಯೆಯನ್ನೂ ನೀಡಲಾಗಿದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸಂಬಂಧಪಟ್ಟ ಅಧಿಕಾರಿಗಳಿಂದ ಪಡೆದುಕೊಳ್ಳಬಹುದು.
Post a Comment