ಹೊಸೂರು: ದೀಪಾವಳಿ ಹಬ್ಬಕ್ಕೆ ಹೊಸ ಬಟ್ಟೆ ತೆಗೆದು ಕೊಡಿಸಿಲ್ಲವೆಂದು ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ತಮಿಳುನಾಡಿನ ಡೆಂಕಣಿಕೋಟೆ ಸಮೀಪದ ಉಳಿಮಂಗಲಂನಲ್ಲಿ ನಡೆದಿದೆ.
ಶಿವಕುಮಾರ್ (19) ಆತ್ಮಹತ್ಯೆ ಮಾಡಿಕೊಂಡ ಯುವಕ.
ಶಿವಕುಮಾರ್ ನರ್ಸರಿ ಫಾರ್ಮ್ನಲ್ಲಿ ಕೆಲಸ ಮಾಡಿಕೊಂಡಿದ್ದ. ಇತ್ತೀಚಿಗೆ ಯುವಕರ ಜೊತೆ ಸೇರಿ ಮದ್ಯವ್ಯಸನಿಯಾಗಿದ್ದ. ದೀಪಾವಳಿ ಹಿನ್ನೆಲೆ ಹಬ್ಬಕ್ಕೆ ಹೊಸ ಬಟ್ಟೆ ಕೊಡಿಸುವಂತೆ ಪಾಲಕರ ಬಳಿ ಕೇಳಿದ್ದಾನೆ.
ಆದರೆ, ಪಾಲಕರು ಬಟ್ಟೆ ಕೊಡಿಸಲು ನಿರಾಕರಿಸಿದ್ದಕ್ಕೆ ಶಿವಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಾತ್ರೂಮ್ನಲ್ಲಿ ನೇಣು ಹಾಕಿಕೊಂಡು ಸಾವನ್ನಾಪ್ಪಿದ್ದಾನೆ.
ಘಟನಾ ಸ್ಥಳಕ್ಕೆ ಡೆಂಕಣಿಕೋಟೆ ಪೋಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಡೆಂಕಣಿಕೋಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.
إرسال تعليق