ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬೆಳ್ತಂಗಡಿ; ಒಂದೇ ಕುಟುಂಬದ ಇಬ್ಬರು ಮಕ್ಕಳು ಮೃತ್ಯು

ಬೆಳ್ತಂಗಡಿ; ಒಂದೇ ಕುಟುಂಬದ ಇಬ್ಬರು ಮಕ್ಕಳು ಮೃತ್ಯು

 


ಬೆಳ್ತಂಗಡಿ: ಮದ್ದಡ್ಕ ಗ್ರಾಮದ ಲಾಡಿ ಎಂಬಲ್ಲಿ ಒಂದೇ ಮನೆಯ ಇಬ್ಬರು ಮಕ್ಕಳು ಜ್ವರದಿಂದಾಗಿ ಮೃತಪಟ್ಟ ಘಟನೆಯೊಂದು ಸಂಭವಿಸಿದೆ.


ಸ್ಥಳೀಯ ನಿವಾಸಿ ಅಬ್ಬಾಸ್ ಎಂಬವರ ಮಕ್ಕಳಾದ ಸಫಾನ್ (8) ಹಾಗೂ ಸಿನಾನ್ (4) ಮೃತರು.


ಮಕ್ಕಳಿಗೆ ಕೆಲವು ದಿನಗಳಿಂದ ಜ್ವರ ಕಾಣಿಸಿಕೊಂಡಿತ್ತು. ಸ್ಥಳೀಯವಾಗಿ ಚಿಕಿತ್ಸೆ ಪಡೆದು ಮಕ್ಕಳು ಮನೆಯಲ್ಲಿಯೇ ಇದ್ದರು. ಈ ನಡುವೆ ಇಬ್ಬರು ಮಕ್ಕಳಿಗೂ ಜ್ವರ ತೀವ್ರವಾಗಿದ್ದು ಬಳಿಕ ಇಬ್ಬರನ್ನೂ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆಗೆ ಸ್ಪಂದಿಸದೆ ಓರ್ವ ಬಾಲಕ ನಿನ್ನೆ ರಾತ್ರಿಯ ಸುಮಾರಿಗೆ ಮೃತಪಟ್ಟಿದ್ದು ಇನ್ನೋರ್ವ ಬಾಲಕ ಇಂದು ಮೃತಪಟ್ಟಿದ್ದಾನೆ. 

0 Comments

Post a Comment

Post a Comment (0)

Previous Post Next Post