ಮಂಗಳೂರು: ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಚಿನ್ನ, ಬೆಳ್ಳಿ, ಮತ್ತು ಕಂಚಿನ ಪದಕ ಪಡೆದ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಿಗೆ ಕೇಂದ್ರ ಸರ್ಕಾರದಿಂದ ನಿಯೋಜಿತ ತಂಡದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ರಾಜ್ಯ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕವನ್ನು ಮರು ಪಾವತಿಸಲು ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರಥಮ ಪಿ.ಯು.ಸಿ.ಯಿಂದ ಸ್ನಾತಕೋತ್ತರ ಪದವಿ (ವೃತ್ತಿಪರ ಕೋರ್ಸ್ ಸಹಿತ) ವ್ಯಾಸಂಗ ಮಾಡುತ್ತಿರುವ ಕೇಂದ್ರ, ರಾಜ್ಯ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಕಾಲೇಜುಗಳ ಕ್ರೀಡಾ ವಿದ್ಯಾರ್ಥಿಗಳು ಅರ್ಹರಾಗಿದ್ದು, ವಿಕಲಚೇತನ ಕ್ರೀಡಾಪಟುಗಳಿಗೂ ಈ ಮಾನದಂಡ ಅನ್ವಯಿಸುತ್ತದೆ.
ಹೆಚ್ಚಿನ ವಿವರ ಹಾಗೂ ಅರ್ಜಿ ನಮೂನೆಯನ್ನು ಮಂಗಳಾ ಕ್ರೀಡಾಂಗಣದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆಯಬಹುದು ಮತ್ತು ಅದೇ ಕಚೇರಿಗೆ ದೃಢೀಕೃತ ದಾಖಲೆಗಳೊಂದಿಗೆ ಅಕ್ಟೋಬರ್ ೨೫ರೊಳಗೆ ಸಲ್ಲಿಸಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
إرسال تعليق