ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಡಾ ಸುರೇಶ ನೆಗಳಗುಳಿ ಅವರಿಗೆ ಶ್ರೀ ಗುರುಕುಲ ತಿಲಕ ಪುರಸ್ಕಾರ

ಡಾ ಸುರೇಶ ನೆಗಳಗುಳಿ ಅವರಿಗೆ ಶ್ರೀ ಗುರುಕುಲ ತಿಲಕ ಪುರಸ್ಕಾರ




ಬೆಳಗಾವಿ: ಕಸ್ತೂರಿ ಸಿರಿಗನ್ನಡ ವೇದಿಕೆ (ರಿ) ಬೆಳಗಾವಿ ವತಿಯಿಂದ ವಿಶ್ವ ಶಿಕ್ಷಕರ ದಿನಾಚರಣೆ ಹಾಗೂ ಶ್ರೀ ಗುರುಕುಲ ತಿಲಕ ಪುರಸ್ಕಾರ ಪ್ರಧಾನ ಸಮಾರಂಭದಲ್ಲಿ ಮಂಗಳೂರಿನ ಮಂಗಳಾ ಆಸ್ಪತ್ರೆಯ ಶಸ್ತ್ರಚಿಕಿತ್ಸಕ, ಕ್ಷಾರ ಚಿಕಿತ್ಸಾ ತಜ್ಞ ಮತ್ತು ಮುನಿಯಾಲ್ ಆಯುರ್ವೇದ ಮೆಡಿಕಲ್ ಕಾಲೇಜು ಮಣಿಪಾಲದಲ್ಲಿ ಪ್ರಾಧ್ಯಾಪಕರಾಗಿರುವ ಡಾ ಸುರೇಶ ನೆಗಳಗುಳಿ ಇವರನ್ನು ಇಂದು (ಅ.9) ಬೆಳಗಾವಿಯಲ್ಲಿ ನಡೆದ ಸಮಾರಂಭದಲ್ಲಿ ಶ್ರೀ ಗುರುಕುಲ ತಿಲಕ ಪುರಸ್ಕಾರ ನೀಡಿ ಗೌರವಿಸಲಾಯಿತು.


ಡಾ ಸುರೇಶ ನೆಗಳಗುಳಿ ಇವರು ವೈದ್ಯರಾದರೂ ಮೂವತ್ತ ಮೂರು ವರ್ಷಗಳಿಂದ ವೈದ್ಯಕೀಯ ಶಿಕ್ಷಕರೂ ಆಗಿದ್ದಾರೆ. ಇದಲ್ಲದೆ ಹದಿನೈದು ವರ್ಷಗಳ ಕಾಲ ಪ್ರಾಂಶುಪಾಲರೂ ಆಗಿದ್ದ ಇವರು ಸ್ನಾತಕೋತ್ತರ ವಿಭಾಗದ ಡೀನ್ ಆಗಿಯೂ ಸೇವೆ ಸಲ್ಲಿಸಿದ್ದಾರೆ.


ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ, ಕುವೆಂಪು ವಿಶ್ವವಿದ್ಯಾಲಯಗಳಲ್ಲಿ ಸಹ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿರುತ್ತಾರೆ. ರಾಜ್ಯ ಮಾತ್ರವಲ್ಲದೆ ಅಂತಾರಾಜ್ಯ ವಿಶ್ವವಿದ್ಯಾಲಯಗಳಲ್ಲಿ ಪರೀಕ್ಷಕರಾಗಿಯೂ ಸೇವೆ ಸಲ್ಲಿಸಿದ ಇವರು ಆಕಾಶವಾಣಿ, ದೂರದರ್ಶನ, ಹಾಗೂ ನಿಯತಕಾಲಿಕಗಳಲ್ಲಿ ತಮ್ಮ ಮಾತು ಮತ್ತು ಬರಹಗಳ ಮೂಲಕ ಪ್ರಸಿದ್ಧರಾಗಿದ್ದಾರೆ.


ಜೇಸಿ, ರೋಟರಿ, ಲಯನ್ಸ್, ಡಾಕ್ಟರ್ಸ್ ಎಸೋಸಿಯೇಶನ್ ಗಳಲ್ಲೂ ಸಕ್ರಿಯ ಸೇವೆ ಸಲ್ಲಿಸಿರುವದಲ್ಲದೆ ಸಾಹಿತ್ಯದ ಅನೇಕ ಪ್ರಕಾರಗಳಲ್ಲೂ ಕೈಯಾಡಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

0 Comments

Post a Comment

Post a Comment (0)

Previous Post Next Post