ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಗ್ರಾಮ ಪಂಚಾಯತ್ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ

ಗ್ರಾಮ ಪಂಚಾಯತ್ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ



ಉಡುಪಿ: ಗ್ರಾಮ ಪಂಚಾಯತ್‌ಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಜಿಲ್ಲೆಯ ಬೈಂದೂರು ತಾಲೂಕು ಕಾಲ್ತೋಡು ಗ್ರಾಮ ಪಂಚಾಯತ್, ಬ್ರಹ್ಮಾವರ ತಾಲೂಕು ಯಡ್ತಾಡಿ ಹಾಗೂ ಉಪ್ಪೂರು ಗ್ರಾಮ ಪಂಚಾಯತ್ ಮತ್ತು ಕಾಪು ತಾಲೂಕು ಮುದರಂಗಡಿ ಗ್ರಾಮ ಪಂಚಾಯತ್‌ನ ಪಿಲಾರು ಕ್ಷೇತ್ರದಲ್ಲಿ ಖಾಲಿ ಇರುವ ತಲಾ ಒಂದು ಸದಸ್ಯ ಸ್ಥಾನ ಸೇರಿದಂತೆ ಒಟ್ಟು 4 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.


ಜಿಲ್ಲಾಧಿಕಾರಿಗಳು ಅಕ್ಟೋಬರ್ 13 ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಲಿದ್ದು, ನಾಮಪತ್ರಗಳನ್ನು ಸಲ್ಲಿಸಲು ಅ. 18 ಕೊನೆಯ ದಿನ. ಅ. 19 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಅ. 21 ಕೊನೆಯ ದಿನ. ಅ. 28 ರಂದು ಬೆಳಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅ. 31 ರಂದು ಬೆಳಗ್ಗೆ 8 ಗಂಟೆಯಿAದ ತಾಲೂಕು ಕೇಂದ್ರಗಳಲ್ಲಿ ಮತಗಳ ಎಣಿಕೆ ನಡೆಯಲಿದೆ.


ಚುನಾವಣೆ ನಡೆಯಲಿರುವ ಈ ಮೇಲ್ಕಂಡ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಅಕ್ಟೋಬರ್ 13 ರಿಂದ 31 ರ ವರೆಗೆ ಚುನಾವಣಾ ನೀತಿ ಸಂಹಿತೆಯು ಜಾರಿಯಲ್ಲಿರಲಿದೆ ಎಂದು ರಾಜ್ಯ ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

0 Comments

Post a Comment

Post a Comment (0)

Previous Post Next Post