ಮಂಗಳೂರು: ದ್ವಿ ಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸೇರಿ ಇಬ್ಬರು ಮೃತಪಟ್ಟಿದ್ದು, ಮಕ್ಕಳಿಬ್ಬರು ಗಾಯಗೊಂಡ ಘಟನೆಯೊಂದು ರಾಷ್ಟ್ರೀಯ ಹೆದ್ದಾರಿ ರಸ್ತೆ ತೊಕ್ಕೊಟ್ಟುವಿನ ಕಲ್ಲಾಪು ಗ್ಲೋಬಲ್ ಮಾರ್ಕೆಟ್ ಬಳಿ ಇಂದು ಬೆಳಿಗ್ಗೆ ನಡೆದಿದೆ.
ಜಪ್ಪಿನಮೊಗರು ನಿವಾಸಿ, ದ್ವಿಚಕ್ರ ವಾಹನ ಸವಾರ ಗಂಗಾಧರ್, ಪತ್ನಿ ನೇತ್ರಾವತಿ ಗಂಭೀರ ಗಾಯಗೊಂಡು ಆಸ್ಪತ್ರೆ ಸಾಗಿಸುವ ಮಧ್ಯೆ ಮೃತಪಟ್ಟಿದ್ದಾರೆ. ಮಕ್ಕಳಾದ ಜ್ಞಾನೇಶ್, ಮೋಕ್ಷಾ ಗಾಯಗೊಂಡಿದ್ದಾರೆ.
ಗಂಗಾಧರ್, ಪತ್ನಿ ಮಕ್ಕಳೊಂದಿಗೆ ಪಂಪ್ ವೆಲ್ ನಿಂದ ತೊಕ್ಕೊಟ್ಟು ಕಡೆಗೆ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಹೋಗುತ್ತಿದ್ದ ಸಂದರ್ಭ ಕಲ್ಲಾಪು ಗ್ಲೋಬಲ್ ಮಾರ್ಕೆಟ್ ಬಳಿ ಲಾರಿ ಡಿಕ್ಕಿ ಹೊಡೆದಿದ್ದು, ಗಂಗಾಧರ್ ಹಾಗೂ ಪತ್ನಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದು, ಮಕ್ಕಳಿಬ್ಬರೂ ಗಾಯಗೊಂಡು ಖಾಸಗಿ ಆಸ್ಟತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಲಾರಿ ಚಾಲಕನ ನಿರ್ಲಕ್ಷ್ಯತನದಿಂದಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ.
إرسال تعليق