ಯಾದಗಿರಿ: ಶಾಲಾ ವಾಹನಕ್ಕೆ ಸಿಲುಕಿ ಮೂರು ವರ್ಷದ ಮಗು ಸಾವನ್ನಪ್ಪಿದ ಘಟನೆಯೊಂದು ಯಾದಗಿರಿ ಜಿಲ್ಲೆಯ ಗುರುಮಠಕಲ್ ನ ಲಕ್ಷ್ಮೀ ನಗರದಲ್ಲಿ ನಡೆದಿದೆ.
ಮನೆಯ ಮುಂದೆ ಆಟವಾಡುತ್ತಿದ್ದ ಮನಸ್ವಿನಿ(3) ಮೃತಪಟ್ಟ ಮಗು, ವಿದ್ಯಾರ್ಥಿಗಳನ್ನು ಮನೆಗೆ ಬಿಡಲು ಬಂದಿದ್ದ ಶಾಲಾ ವಾಹನಕ್ಕೆ ಸಿಲುಕಿ ಮನಸ್ವಿನಿ ಮೃತಪಟ್ಟಿದ್ದಾಳೆ.
ಮನೆ ಎದುರು ಆಟವಾಡುತ್ತಿದ್ದ ವೇಳೆ ಶಾಲಾ ವಾಹನಕ್ಕೆ ಸಿಲುಕಿ ಮಗು ಮೃತಪಟ್ಟಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಪೊಲೀಸರು ಶಾಲಾ ವಾಹನದ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದು, ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
إرسال تعليق