ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮರದ ಗೆಲ್ಲು ಕಡಿಯುವಾಗ ವಿದ್ಯುತ್ ಪ್ರವಹಿಸಿ ಯುವಕ ಸಾವು

ಮರದ ಗೆಲ್ಲು ಕಡಿಯುವಾಗ ವಿದ್ಯುತ್ ಪ್ರವಹಿಸಿ ಯುವಕ ಸಾವು

 


ಕುಂದಾಪುರ: ಮರದ ಗೆಲ್ಲು ಕಡಿಯುವಾಗ ವಿದ್ಯುತ್ ಪ್ರವಹಿಸಿ ಯುವಕನೊಬ್ಬ ಮೃತಪಟ್ಟ ಘಟನೆಯೊಂದು ಗುಜ್ಜಾಡಿ ಗ್ರಾಮದ ನಾಯಕವಾಡಿ ಚೆಕ್‌ಪೋಸ್ಟ್‌ ಬಳಿ ನಡೆದಿರುವುದಾಗಿ ವರದಿಯಾಗಿದೆ.


ಗುಜ್ಜಾಡಿ ಗ್ರಾಮದ ನಿವಾಸಿ ಸುಜಯ (20) ಮೃತ ಯುವಕ.


ಸಂಗಮೇಶ್ವರ ದೇವಸ್ಥಾನದ ಕಾರ್ತಿಕ ದೀಪೋತ್ಸವದ ಕಟ್ಟೆಪೂಜೆಯ ಸಿದ್ದತೆ ಮಾಡುತ್ತಾ ಮಾವಿನ ತೋರಣ ಕಟ್ಟಲು ಕಟ್ಟೆಯ ಬಳಿ ಇರುವ ಮಾವಿನ ಮರದ ಕೊಂಬೆಯನ್ನು ಕಡಿಯಲು ಮರ ಹತ್ತಿ, ಮರದ ಕೊಬೆಯನ್ನು ಕಡಿಯುವಾಗ, ಮರದ ಕೊಂಬೆಯು ಸಮೀಪದಲ್ಲಿ ಹಾದು ಹೋದ ವಿದ್ಯುತ್‌ ತಂತಿಯ ಮೇಲೆ ಬಿದ್ದಿದ್ದರಿಂದ ವಿದ್ಯುತ್ ಪ್ರವಹಿಸಿ ಸುಜಯ್‌ರವರಿಗೆ ತಗುಲಿದ್ದು ತಕ್ಷಣ ಅವರನ್ನು ಸ್ಥಳೀಯರ ಸಹಕಾರದಲ್ಲಿ ಆ್ಯಂಬುಲೆನ್ಸ್ ಮೂಲಕ ಕುಂದಾಪುರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.


ಯುವಕನನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.


ಈ ಬಗ್ಗೆ ಗಂಗೊಳ್ಳಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ



0 تعليقات

إرسال تعليق

Post a Comment (0)

أحدث أقدم