ಕಾರ್ಕಳ : ನಿಟ್ಟೆಯ ಮೆಸ್ಕಾಂ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲ್ಯಾ ಗ್ರಾಮದ ಕೇಪುಲ ಎಂಬಲ್ಲಿ ನಡೆದಿದೆ.
ಮೃತ ಯುವತಿಯನ್ನು ನಿಶಾ (23) ಎಂದು ಗುರುತಿಸಲಾಗಿದೆ.
ಮನೆ ಸಮೀಪದ ಹಾಡಿಯಲ್ಲಿ ನಿಶಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆರು ತಿಂಗಳ ಹಿಂದೆ ಮುಲ್ಕಿ ಠಾಣೆ ವ್ಯಾಪ್ತಿಯಲ್ಲಿ ನಿಶಾ ಅಣ್ಣ ಆತ್ಮಹತ್ಯೆಗೆ ಶರಣಾಗಿದ್ದ. ಇದೇ ನೋವಿನಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
إرسال تعليق