ಚಾಮರಾಜನಗರ: ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಪೊಲೀಸ್ ಜೀಪ್ ನಿಂದ ಜಿಗಿದಿದ್ದ ಆರೋಪಿ ಸಾವನ್ನಪ್ಪಿದ ಘಟನೆಯೊಂದು ಮಾಂಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಮಾಂಬಳ್ಳಿಯಲ್ಲಿ ಘಟನೆ ನಡೆದಿದೆ.
ಕುಂತೂರು ಮೋಳೆ ಗ್ರಾಮದ 24 ವರ್ಷದ ನಿಂಗರಾಜ್ ಮೃತಪಟ್ಟವರು ಎಂದು ಹೇಳಲಾಗಿದೆ.
ಅಪ್ರಾಪ್ತೆ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿದ್ದ ನಿಂಗರಾಜ್ ನನ್ನು ವಿಚಾರಣೆಗಾಗಿ ಪೊಲೀಸರು ಠಾಣೆಗೆ ಕರೆದೊಯ್ಯುತ್ತಿದ್ದ ವೇಳೆ ಜೀಪ್ ನಿಂದ ಜಿಗಿದಿದ್ದ.
ಜೀಪ್ ನಿಂದ ಜಿಗಿದಿದ್ದರಿಂದ ನಿಂಗರಾಜ್ ತೀವ್ರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಿಸದೆ ಯಳಂದೂರು ತಾಲ್ಲೂಕು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.
Post a Comment