ಬೆಂಗಳೂರು: ನಟಿ ಅದಿತಿ ಪ್ರಭುದೇವ ನವೆಂಬರ್ 27ರಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದು, ತಮ್ಮ ಮದುವೆ ಆಮಂತ್ರಣ ಪತ್ರಿಕೆಯಲ್ಲಿ 'ಕರುನಾಡ ತಾಯಿ ಭುವನೇಶ್ವರಿ ಆಶೀರ್ವಾದದೊಂದಿಗೆ' ಎಂದು ಹಾಕಿಸಿಕೊಳ್ಳುವ ಮೂಲಕ ಕನ್ನಡಿಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಮೂಲತಃ ದಾವಣಗೆರೆಯವರಾದ ಅದಿತಿ ಪ್ರಭುದೇವ ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರ್ ಸಾಗರದಲ್ಲಿ ಯಶಸ್ವಿ ಅವರ ಜೊತೆ ವಿವಾಹವಾಗುತ್ತಿದ್ದು, ಆಮಂತ್ರಣ ಪತ್ರಿಕೆಗಳನ್ನು ರಾಜಕೀಯ ನಾಯಕರಿಗೆ ನೀಡಿ ವಿವಾಹಕ್ಕೆ ಆಗಮಿಸುವಂತೆ ಆಹ್ವಾನಿಸಿದ್ದಾರೆ.
ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಗೃಹ ಸಚಿವ ಅರಗ ಜ್ಞಾನೇಂದ್ರ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ವಸತಿ ಸಚಿವ ವಿ. ಸೋಮಣ್ಣ ಸೇರಿದಂತೆ ಹಲವು ರಾಜಕೀಯ ನಾಯಕರಿಗೆ ಅದಿತಿ ಪ್ರಭುದೇವ ಆಮಂತ್ರಣ ಪತ್ರಿಕೆ ನೀಡಿದ್ದಾರೆ.
إرسال تعليق