ಬಾಲಿವುಡ್‌ನ ಖ್ಯಾತ ನಟಿ ಐಶ್ವರ್ಯಾ ರೈ ಬಚ್ಚನ್ ಮಗಳು ಆರಾಧ್ಯಳ 11 ನೇ ವರ್ಷದ ಹುಟ್ಟುಹಬ್ಬವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ವಿಶೇಷ ಪೋಸ್ಟ್‌ನ್ನು ಹಂಚಿಕೊಳ್ಳುವ ಮೂಲಕ ಶುಭ ಹಾರೈಸಿದ್ದಾರೆ.
ಐಶ್ವರ್ಯಾ ರೈ ಮಗಳು ಆರಾಧ್ಯ ತಮ್ಮ ತಾಯಿಯಿಂದ ವಿಶೇಷ ಹುಟ್ಟುಹಬ್ಬದ ಶುಭಾಶಯವನ್ನು ಸ್ವೀಕರಿಸಿದ್ದಾರೆ.
ಆರಾಧ್ಯ ಅವರ 11 ನೇ ಹುಟ್ಟುಹಬ್ಬದಂದು, ಐಶ್ ಸಾಮಾಜಿಕ ಜಾಲತಾಣದಲ್ಲಿ ವಿಶೇಷ ಪೋಸ್ಟ್‌ನ್ನು ಹಂಚಿಕೊಂಡಿದ್ದು, ಅದರಲ್ಲಿ “ನನ್ನ ಪ್ರೀತಿ. ನನ್ನ ಜೀವನ. ನಾನು ನಿನ್ನನ್ನು ಪ್ರೀತಿಸುತ್ತೇನೆ ನನ್ನ ಆರಾಧ್ಯ” ಎಂದು ಬರೆದುಕೊಂಡಿದ್ದಾರೆ.
إرسال تعليق