ಬಂಟ್ವಾಳ: ಅಮ್ಮುಂಜೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿರುವ ಎರಡು ದಿನಗಳ ಬಂಟ್ವಾಳ ತಾಲೂಕು 22 ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕರುಣಾಕರ ಆಳ್ವ ಅಮ್ಮುಂಜೆಗುತ್ತು ರಾಷ್ಟ್ರಧ್ವಜಾರೋಹಣ ನಡರವೇರಿಸಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ ಎಂ ಪಿ. ಶ್ರೀನಾಥ್ ಪರಿಷತ್ತಿನ ಧ್ವಜಾರೋಹಣ ನೆರವೇರಿಸಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಕನ್ನಡ ಧ್ವಜಾರೋಹಣ ಮಾಡಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಸುಗುಣಾ ಸಂಕಪ್ಪ ಶೆಟ್ಟಿ, ಶಿಕ್ಷ ಕ ಹರೀಶ್ ರಾವ್, ತಾಲೂಕು ಕಸಾಪ ಮಾಜಿ ಅಧ್ಯಕ್ಷ ಜಯಾನಂದ ಪೆರಾಜೆ, ಪದಾಧಿಕಾರಿಗಳಾದ ವಿ ಸುಬ್ರಹ್ಮಣ್ಯ ಭಟ್, ರಮಾನಂದ ನೂಜಿಪ್ಪಾಡಿ, ಡಿ. ಬಿ ಅಬ್ದುಲ್ ರಹಮಾನ್, ಗಣೇಶ ಪ್ರಸಾದ ಪಾಂಡೇಲು, ಪಿ ಮಹಮ್ಮದ್, ಸ್ವಾಗತ ಸಮಿತಿಯ ಜನಾರ್ದನ ಅಮ್ಮುಂಜೆ, ಅಬೂಬಕರ್ ಅಮುಂಜೆ ಮೊದಲಾದ ವರು ಉಪಸ್ಥಿತರಿದ್ದರು. ಸ್ಥಳೀಯ ಶಾಲೆ ಮಕ್ಕಳು ರಾಷ್ಟ್ರಗೀತೆ ಹಾಡಿದರು. ಮುದಸಿರ್ ಕಣಿಯೂರು ಮತ್ತು ಬಾಲಕೃಷ್ಣ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment