ಮುಂಬೈ : ಬಾಲಿವುಡ್ ನಟಿ ಆಲಿಯಾ ಭಟ್ ಇಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ನಟ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ತಮ್ಮ ಮೊದಲ ಮಗುವನ್ನು ಸ್ವಾಗತಿಸಿದ್ದಾರೆ ಎಂದು ರಣಬೀರ್ ಸಹೋದರಿ ರಿದ್ಧಿಮಾ ಕಪೂರ್ ಸಾಹ್ನಿ ಖಚಿತಪಡಿಸಿದ್ದಾರೆ.
ಭಾನುವಾರ ಬೆಳಿಗ್ಗೆ, ಆಲಿಯಾ ಮತ್ತು ರಣಬೀರ್ ಮುಂಬೈನ ಎಚ್‌ಎನ್ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ಆಗಮಿಸಿದ್ದರು.
ಇದಾಗಿ ಕೆಲವೇ ಗಂಟೆಗಳಲ್ಲಿ ಆಲಿಯಾ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
Post a Comment