ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ರಾಜ್ಯ ಸರ್ಕಾರವು ಮುಸ್ಲಿಂ ಹೆಣ್ಣು ಮಕ್ಕಳಿಗಾಗಿ ಪ್ರತ್ಯೇಕ ಕಾಲೇಜು ನಿರ್ಮಾಣ; ಪ್ರತಿ ಕಾಲೇಜಿಗೆ 2.50 ಕೋಟಿ ಅನುದಾನ ಮೀಸಲು

ರಾಜ್ಯ ಸರ್ಕಾರವು ಮುಸ್ಲಿಂ ಹೆಣ್ಣು ಮಕ್ಕಳಿಗಾಗಿ ಪ್ರತ್ಯೇಕ ಕಾಲೇಜು ನಿರ್ಮಾಣ; ಪ್ರತಿ ಕಾಲೇಜಿಗೆ 2.50 ಕೋಟಿ ಅನುದಾನ ಮೀಸಲು

 


ಮುಸ್ಲಿಂ ಹೆಣ್ಣು ಮಕ್ಕಳಿಗಾಗಿ ಪ್ರತ್ಯೇಕ ಕಾಲೇಜು ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಪ್ರತಿ ಕಾಲೇಜಿಗೆ 2.50 ಕೋಟಿ ಅನುದಾನವನ್ನು ಮೀಸಲಿರಿಸಲಾಗಿದೆ.

ಮುಂದಿನ ತಿಂಗಳು ಮುಸ್ಲಿಂ ವಿದ್ಯಾರ್ಥಿನಿಯರ ಕಾಲೇಜು ಯೋಜನೆಗೆ ಶಂಕುಸ್ಥಾಪನೆ ಮಾಡಲಿದ್ದು, ಕಾಲೇಜು ನಿರ್ಮಾಣದ ಉದ್ಘಾಟನೆಗೆ ಮುಖ್ಯಮಂತ್ರಿಗೆ ಆಹ್ವಾನ ನೀಡಲಾಗಿದೆ.

ವಕ್ಫ್ ಬೋರ್ಡ್‌ಗೆ ರಾಜ್ಯ ಸರ್ಕಾರ ನೀಡುವ ಅನುದಾನದಲ್ಲಿ ಈ ವೆಚ್ಚವನ್ನು ಭರಿಸಲು ನಿರ್ಧಾರ ಮಾಡಲಾಗಿದ್ದು ತರಗತಿಯಲ್ಲಿ ಹಿಜಾಬ್‌ ಧರಿಸದಂತೆ ಸರ್ಕಾರ ಆದೇಶ ಹೊರಡಿಸಿದ‌ ಕಾರಣ. ಬಹುತೇಕ ಮುಸ್ಲಿಂ ಸಂಘ, ಸಂಸ್ಥೆಗಳು ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದವು. ಇದೀಗ ಚುನಾವಣೆಯ ಪರ್ವ ಕಾಲದಲ್ಲಿ ಸರ್ಕಾರವೇ ಮುತುವರ್ಜಿ ವಹಿಸಿ ಮುಸ್ಲಿಂ ಹೆಣ್ಣು ಮಕ್ಕಳಿಗಾಗಿ ರಾಜ್ಯದ ದಕ್ಷಿಣ‌ಕನ್ನಡ‌ ಜಿಲ್ಲೆಯ ಅಡ್ಯಾರ್ ಕಣ್ಣೂರಿನಲ್ಲಿ, ಉಡುಪಿ,‌ಶಿವಮೊಗ್ಗ, ಚಿಕ್ಕಮಗಳೂರು, ಉತ್ತರಕರ್ನಾಟಕ ಸೇರಿದಂತೆ ರಾಜ್ಯದ ಹತ್ತು ಕಡೆ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಕಾಲೇಜು ಸ್ಥಾಪನೆ ಮಾಡಿಕೊಡಲು ಮುಂದಾಗಿದೆ ಎಂದು ವಕ್ಫ್ ಬೋರ್ಡ್​ ಅಧ್ಯಕ್ಷ ಶಫಿ ಸಾ ಅದಿ ಹೇಳಿದ್ದಾರೆ.


ಉಡುಪಿಯ ಸರ್ಕಾರಿ ಶಾಲೆಯಲ್ಲಿ ಹಿಜಾಬ್​ ಧರಿಸಿಕೊಂಡು ಬರುತ್ತಿದ್ದ ಹೆಣ್ಣು ಮಕ್ಕಳಿಂದ ಶುರುವಾದ ಈ ಗಲಾಟೆ ರಾಜ್ಯದ್ಯಂತ ದೊಡ್ಡ ಮಟ್ಟದ ವಿವಾದವನ್ನು ಸೃಷ್ಟಿಸಿ ಕೋರ್ಟ್​ ಮೆಟ್ಟಿಲೇರಿತ್ತು. ಇದೀಗ ಈ ವಿವಾದವಾಗಿ ಒಂದು ವರ್ಷದ ಮೊದಲೇ ಮುಸ್ಲಿಂ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಕಾಲೇಜು ಸ್ಥಾಪನೆ ಮಾಡಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.

0 Comments

Post a Comment

Post a Comment (0)

Previous Post Next Post