ಬೆಳ್ತಂಗಡಿ : ಯಾತ್ರಾರ್ಥಿ ಧರ್ಮಸ್ಥಳದ ಹೊಸ ಪೊಲೀಸ್ ಠಾಣೆ ಪಕ್ಕ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಇಂದು ನಡೆದಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ನೆಲಮಂಗಲ ನಿವಾಸಿ ಉಮೇಶ (55) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶುಕ್ರವಾರ ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಪೊಲೀಸ್ ಠಾಣೆಯ ಸಮೀಪ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಮೃತದೇಹದಲ್ಲಿ ಪತ್ತೆಯಾದ ಚೀಟಿಯಲ್ಲಿ ಬರೆದಿದ್ದ ದೂರವಾಣಿ ಸಂಖ್ಯೆಗೆ ಕರೆಮಾಡಿದಾಗ ಮೃತಪಟ್ಟವರ ಬಗ್ಗೆ ಮಾಹಿತಿ ತಿಳಿದು ಬಂದಿದ್ದು ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದ್ದು ಶವವನ್ನು ಬೆಳ್ತಂಗಡಿ ಶವಗಾರಕ್ಕೆ ಸಾಗಿಸಲಾಗಿದೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
إرسال تعليق