ಪಾಣಾಜೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಪುತ್ತೂರು ಮತ್ತು ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜು ಇದರ ಕನ್ನಡ ಮಾಧ್ಯಮ ಪ್ರೌಢ ಶಾಲಾ ವಿಭಾಗದಲ್ಲಿ ಇಂದು ಜರುಗಿದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿಯ ಛದ್ಮವೇಷ ಸ್ಪರ್ಧೆಯಲ್ಲಿ ನಮ್ಮ ಸುಬೋಧ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಕು.ಕೀರ್ತನಾ ಅವರು ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ.
ಇವರು ಸೂರಂಬೈಲು ಉದಯಕುಮಾರ್ ಮತ್ತು ಲಲಿತಾ ದಂಪತಿಯ ಪುತ್ರಿ. ಕೀರ್ತನಾ ಅವರಿಗೆ ಶಾಲೆಯಲ್ಲಿ ಗೌರವ ಗುಮಾಸ್ತರಾಗಿ ಕೆಲಸ ಮಾಡುತ್ತಿರುವ ಎ.ಎನ್ ಕೊಳಂಬೆಯವರು ಮೇಕ್ ಅಪ್ ಮಾಡಿರುತ್ತಾರೆ. ಕೀರ್ತನಾ ಅವರು ನಮ್ಮ ಸುಬೋಧ ಪ್ರೌಢಶಾಲೆಯಲ್ಲಿ ಜರುಗಿದ ಪುತ್ತೂರು ವಲಯ ಮಟ್ಟದ ಪ್ರತಿಭಾ ಕಾರಂಜಿಯ ಛದ್ಮವೇಷ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
إرسال تعليق