ಕೋಲ್ಕತ್ತಾ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಉತ್ತರ ಬಂಗಾಳದ ಸಿಲಿಗುರಿಯಲ್ಲಿ ನಡೆದ ಕಾರ್ಯಕ್ರಮವೊಂದರ ವೇದಿಕೆಯಲ್ಲಿ ಅಸ್ವಸ್ಥರಾಗಿದ್ದಾರೆ.
ಗಡ್ಕರಿ ಅವರು ನಗರದ NH10 ಉದ್ದಕ್ಕೂ 13 ಕಿಮೀ ಚತುಷ್ಪಥ ಎಲಿವೇಟೆಡ್ ರಸ್ತೆಯ ನಿರ್ಮಾಣಕ್ಕೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮದ ಮಧ್ಯದಲ್ಲಿ ಅವರು ಅಸ್ವಸ್ಥರಾಗಿದ್ದು, ಕೂಡಲೇ ವೈದ್ಯರು ಬಂದು ಅವರನ್ನು ಪರೀಕ್ಷಿಸಿದ್ದಾರೆ
"ಅವರ ರಕ್ತದಲ್ಲಿನ ಸಕ್ಕರೆ ಅಂಶದಲ್ಲಿನ ಹಠಾತ್ ಕುಸಿತವು ಕೇಂದ್ರ ಸಚಿವರ ಅನಾರೋಗ್ಯಕ್ಕೆ ಕಾರಣವಾಯಿತು. ವೈದ್ಯರು ಅವರಿಗೆ ಚಿಕಿತ್ಸೆ ನೀಡಿದರು," ಎಂದು ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ.
Post a Comment