ಉಚ್ಚಿಲ : ಇತ್ತೀಚೆಗೆ ನವೀಕೃತ ಗೊಂಡ ಉಡುಪಿ ಕಾಪುವಿನ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರರವರು ಬುಧವಾರ ಸಂಜೆ ಭೇಟಿ ನೀಡಿ ಶ್ರೀ ಮಹಾಲಕ್ಷ್ಮಿಯ ದರ್ಶನ ಪಡೆದರು.
ದೇವಳದ ವತಿಯಿಂದ ಅವರನ್ನು ಪೂರ್ಣ ಕುಂಭದೊಂದಿಗೆ ಸ್ವಾಗತಿಸಲಾಯಿತು.
ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಮುಖ್ಯ ಅರ್ಚಕ ಕೆ ವಿ ರಾಘವೇಂದ್ರ ಉಪಾಧ್ಯಾಯ ಹಾಗೂ ವಿಷ್ಣುಮೂರ್ತಿ ಉಪಾಧ್ಯಾಯರವರು ಶ್ರೀದೇವಿಗೆ ಪೂಜೆ ಸಲ್ಲಿಸಿ ಪ್ರಸಾದ ವಿತರಿಸಿದರು.
ದೇವಾಲಯದ ರುವಾರಿ ನಾಡೋಜ ಡಾ. ಜಿ. ಶಂಕರ್ ರವರು ದೇವಳದ ವತಿಯಿಂದ ಗೃಹ ಸಚಿವರನ್ನು ಸನ್ಮಾನಿಸಿ ಸ್ಮರಣಿಕೆ ನೀಡಿದರು.
إرسال تعليق