ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪುತ್ತೂರು; ದ.ಕ ಜಿಲ್ಲೆಯಲ್ಲಿ ನಿರ್ಮಾಣವಾಗಲಿರುವ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ

ಪುತ್ತೂರು; ದ.ಕ ಜಿಲ್ಲೆಯಲ್ಲಿ ನಿರ್ಮಾಣವಾಗಲಿರುವ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ

 


ಪುತ್ತೂರು: ದ. ಕನ್ನಡ ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣವಾಗಲಿದ್ದು, ಪುತ್ತೂರಿನ ಈ ಸ್ಟೇಡಿಯಂ ನಿರ್ಮಾಣವಾಗಲಿದ್ದು, ಇದಕ್ಕಾಗಿ 23.25 ಎಕರೆ ಸರಕಾರಿ ಜಮೀನು ಮಂಜೂರು ಮಾಡಲಾಗಿದೆ.


ಪುತ್ತೂರು ನಗರ ಸಮೀಪದ, ನಗರಸಭಾ ವ್ಯಾಪ್ತಿಯಲ್ಲಿ ಬರುವ, ಕಬಕ ಗ್ರಾಮದ ಸರ್ವೇ ನಂಬರ್‌ 260/1ಪಿ1ರಲ್ಲಿ 23.25 ಎಕ್ರೆ ಸರಕಾರಿ ಜಮೀನನ್ನು ಗುರುತಿಸಲಾಗಿದೆ.


ಮಂಜೂರಾದ ಜಾಗದಲ್ಲಿ ಅತ್ಯಾಧುನಿಕ ಪೆವಿಲಿಯನ್‌, ಮೈದಾನ ನಿರ್ಮಿಸಲಾಗುತ್ತದೆ. ಅನಂತರ ಸುಂದರ ಸ್ಟೇಡಿಯಂ ನಿರ್ಮಿಸುವ ಗುರಿ ಇದೆ.

ಇದಕ್ಕಾಗಿ ಹೂಡಿಕೆ ಮಾಡಲು ತಾನು ಸಿದ್ಧನಿದ್ದೇನೆ ಎಂದು ಕ್ರಿಕೆಟ್‌ ಅಸೋಸಿಯೇಶನ್‌ ಪುತ್ತೂರು ಸಹಾಯಕ ಆಯುಕ್ತರಿಗೆ ಭರವಸೆ ನೀಡಿತ್ತು.

ಕೊಡಗು ಜಿಲ್ಲೆಯ ಹೊದ್ದೂರಿನ ಮಾದರಿಯಲ್ಲೇ ಪುತ್ತೂರಿನಲ್ಲೂ ಸುದೀರ್ಘಾವಧಿಗೆ ಗುತ್ತಿಗೆ ಆಧಾರದಲ್ಲಿ ಜಮೀನು ಪಡೆದು ಮೂಲಸೌಕರ್ಯ ಯೋಜನೆ ಅನುಷ್ಠಾನಿಸುವ ಗುರಿ ಹೊಂದಲಾಗಿದೆ


0 تعليقات

إرسال تعليق

Post a Comment (0)

أحدث أقدم