ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕಾಂತಾರ ಚಿತ್ರದ ದೈವ ಪಾತ್ರದಂತೆ ಮುಖವರ್ಣಿಕೆ ಧರಿಸಿದ ಶ್ವೇತಾ ರೆಡ್ಡಿ; ಧರ್ಮಸ್ಥಳಕ್ಕೆ ಬಂದು ತಪ್ಪು ಕಾಣಿಕೆ ಸಲ್ಲಿಸಿ, ಹೆಗ್ಡೆಯವರಲ್ಲಿ ಕ್ಷಮಾಪಣೆ

ಕಾಂತಾರ ಚಿತ್ರದ ದೈವ ಪಾತ್ರದಂತೆ ಮುಖವರ್ಣಿಕೆ ಧರಿಸಿದ ಶ್ವೇತಾ ರೆಡ್ಡಿ; ಧರ್ಮಸ್ಥಳಕ್ಕೆ ಬಂದು ತಪ್ಪು ಕಾಣಿಕೆ ಸಲ್ಲಿಸಿ, ಹೆಗ್ಡೆಯವರಲ್ಲಿ ಕ್ಷಮಾಪಣೆ

 


ಬೆಳ್ತಂಗಡಿ: “ಕಾಂತಾರ’ ಸಿನಿಮಾದಲ್ಲಿರುವ ದೈವದ ಪಾತ್ರದಂತೆ ಮುಖವರ್ಣಿಕೆ ಮಾಡಿಕೊಂಡ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ವ್ಯಕ್ತವಾದ ಹೈದರಾಬಾದ್‌ ಮೂಲದ ಶ್ವೇತಾ ರೆಡ್ಡಿ ಅವರು ಧರ್ಮಸ್ಥಳಕ್ಕೆ ಬಂದು ತಪ್ಪು ಕಾಣಿಕೆ ಸಲ್ಲಿಸಿ, ಡಾ| ಡಿ.ವೀರೇಂದ್ರ ಹೆಗ್ಗಡೆಯವರಲ್ಲಿ ಕ್ಷಮಾಪಣೆ ಕೇಳಿ ಆಶೀರ್ವಾದ ಪಡೆದ ಘಟನೆಯೊಂದು ನ. 3ರಂದು ನಡೆದಿದೆ.


ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಶ್ವೇತಾ, ಇದನ್ನು ತಿಳಿದು ಮಾಡಿರಲಿಲ್ಲ, ಯಕ್ಷಗಾನ ಪಾತ್ರ ಮತ್ತು ಇದು ಒಂದೇ ಎಂದುಕೊಂಡಿದ್ದೆ. ಟೀಕೆಗಳು ಬಂದ ಬಳಿಕ ಬೇರೆ ಬೇರೆ ಎಂದು ತಿಳಿಯಿತು. ಸಮಸ್ತ ದೈವಾರಾಧಕರಲ್ಲಿ ಹಾಗೂ ಜನತೆಯಲ್ಲಿ ದಯವಿಟ್ಟು ಕ್ಷಮಿಸಿ ಎಂದು ಕೇಳಿಕೊಳ್ಳುವುದಾಗಿ ತಿಳಿಸಿದರು.


0 تعليقات

إرسال تعليق

Post a Comment (0)

أحدث أقدم