ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ನಿಶ್ಚಿತಾರ್ಥಕ್ಕೆ ಹೊರಟ ಟೆಂಪೋ ಪಲ್ಟಿ ; 28 ಮಂದಿಗೆ ಗಾಯ

ನಿಶ್ಚಿತಾರ್ಥಕ್ಕೆ ಹೊರಟ ಟೆಂಪೋ ಪಲ್ಟಿ ; 28 ಮಂದಿಗೆ ಗಾಯ

 


ಬೆಳಗಾವಿ: ಮದುವೆ ನಿಶ್ಚಿತಾರ್ಥಕ್ಕೆ ಹೊರಟ ಟೆಂಪೋ ಪಲ್ಟಿಯಾದ ಪರಿಣಾಮ ಅದರಲ್ಲಿದ್ದ ಒಂದೇ ಕುಟುಂಬದ 28 ಪ್ರಯಾಣಿಕರು ಗಾಯಗೊಂಡ ಘಟನೆಯೊಂದು ಖಾನಾಪುರ ತಾಲೂಕಿನ ಗರ್ಲಗುಂಜಿ ಗ್ರಾಮದ ಬಳಿ ಸಂಭವಿಸಿದೆ.

ಅಪಘಾತದಲ್ಲಿ ಗಾಯಗೊಂಡವರೆಲ್ಲ ಬೆಳಗಾವಿ ತಾಲೂಕಿನ ಹುದಲಿ ಗ್ರಾಮದ ಒಂದೇ ಕುಟುಂಬದವರಾಗಿದ್ದು, ಗರ್ಲಗುಂಜಿ ಗ್ರಾಮದಲ್ಲಿ ನಿಗದಿಯಾಗಿದ್ದ ಮದುವೆ ನಿಶ್ಚಿತಾರ್ಥದಲ್ಲಿ ಭಾಗವಹಿಸಲು ಬರುತ್ತಿದ್ದ ವೇಳೆ ಅವಘಡ ನಡೆದಿದೆ.


ಗರ್ಲಗುಂಜಿ ಮತ್ತು ರಾಜಹಂಸಗಡ ಗ್ರಾಮಗಳ ನಡುವಿನ ಇಳಿಜಾರಿನಲ್ಲಿ ಸಾಗುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಅಪಘಾತವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ವೃದ್ಧರು, ಮಕ್ಕಳು ಮತ್ತು ಮಹಿಳೆಯರೂ ಸಹ ಗಾಯಗೊಂಡಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.


0 Comments

Post a Comment

Post a Comment (0)

Previous Post Next Post